ರಾಜ್ಯದಲ್ಲಿ ಇಂದು ಮತ್ತೆ ಕೊರೊನಾ ಕೇಸ್‍ಗಳು ಡಬಲ್ ಆಗಿದ್ದು 4246 ಜನರಿಗೆ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಹೌದು ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಅಲ್ಲದೇ ಡಬಲ್ ಮೇಲೆ ಡಬಲ್ ಆಗುತ್ತಿದೆ. ಇದರಿಂದ ರಾಜ್ಯದ ಜನ ಮತ್ತಷ್ಟು ಆತಂಕಕ್ಕೆ ಒಳಗಾಗುವಂತೆ ಆಗಿದೆ. ಬುಧವಾರ ರಾಜ್ಯ ಆರೋಗ್ಯ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ 4246 ಪಾಸಿಟಿವ್ ಕೇಸ್‍ಗಳು ದೃಢಪಟ್ಟಿವೆ. ಇದರಲ್ಲಿ ಬೆಂಗಳೂರಿನಲ್ಲಿಯೇ 3605 ಕೇಸ್‍ಗಳು ಬಂದಿವೆ, ಇಂದು ಶೇ.3.33ರಷ್ಟು ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ದಾಖಲಾಗಿದೆ. ಅದೇ ರೀತಿ ಇಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದು, ಬೆಂಗಳೂರಿನಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.