ರಾಜ್ಯಾಧ್ಯಂತ ಎರಡು ವಾರ ವೀಕೆಂಡ್ ಲಾಕ್ಡೌನ್ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಾಲಾ ಕಾಲೇಜುಗಳು ಆನ್ಲೈನ್ ವಿಧಾನದಲ್ಲಿ ನಡೆಯುತ್ತದೆ. 6ನೇ ತಾರೀಖಿನಿಂದ ಜಾರಿಯಾಗುವಂತೆ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ. ಆಹಾರ ವಸ್ತು, ಹೊಟೆಲ್ಗಳಲ್ಲಿ ಪಾರ್ಸೆಲ್, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ.
ಸಿಎಂ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು. ಸಭೆ ಬಳಿಕ ಸಚಿವರಾದ ಆರ್. ಅಶೋಕ್, ಡಾ.ಕೆ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. ಚಿತ್ರಮಂದಿರ, ಮಾಲ್, ಬಾರ್, ಪಬ್ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ. ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ. ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು. ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್ಟಿಪಿಸಿಆರ್ ಕಡ್ಡಾಯ. ವಿದೇಶಿ ಪ್ರಯಾಣಿಕರ ಟ್ರ್ಯಾಕಿಂಗ್-ಟ್ರೇಸಿಂಗ್ ಬಲಪಡಿಸಲು ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿ ನೇತೃತ್ವದಲ್ಲಿ ಕೊವಿಡ್ ನಿರ್ವಹಣೆ ಸಭೆ ನಡೆಯಿತು. ನಾವು ತೆಗೆದುಕೊಂಡ ತೀರ್ಮಾನಗಳನ್ನು ವೈಜ್ಞಾನಿವಾಗಿ ವಿಶ್ವ ಆರೋಗ್ಯ ಸಂಸ್ಥೆ, ಕೇಂದ್ರ ಸರ್ಕಾರ, ಅಕ್ಕಪಕ್ಕದ ಮಹಾರಾಷ್ಟ್ರ, ಕೇರಳ, ತಮಿಳುನಾಡು ಗಳಲ್ಲಿ ತೆಗೆದುಕೊಂಡಿರುವ ತೀರ್ಮಾನಗಳನ್ನು ಪರಾಮರ್ಶಿಸಿದೆವು. ಒಮಿಕ್ರಾನ್ ಸೋಂಕು ಕೊವಿಡ್ಗಿಂತ 5 ಪಟ್ಟು ಜಾಸ್ತಿ ಆಗ್ತಿದೆ ಅಂತ ತಜ್ಞರು ವರದಿ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಪಸ್ತುತ 3048 ಮಂದಿಗೆ ಸೋಂಕು ಬಂದಿದೆ. 147 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ನಮ್ಮ ರಾಜ್ಯದಲ್ಲಿ ಪಾಸಿಟಿವ್ ಪ್ರಕರಣ ಶೇ 3ಕ್ಕಿಂತ ಹೆಚ್ಚಾಗುತ್ತಿದೆ. 20ರಿಂದ 50 ವರ್ಷದವರಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ತಿದೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ.