COVID-19

ವಾರಾಂತ್ಯ ಕರ್ಫ್ಯೂಗೆ ಉತ್ತಮ ಪ್ರತಿಕ್ರಿಯೆ

Share

ಓಮೈಕ್ರಾನ್‌ ಮತ್ತು ಕೊರೊನಾ ನಿಯಂತ್ರಣಕ್ಕಾಗಿ ಜಾರಿ ಮಾಡಲಾಗಿರುವ ವಾರಾಂತ್ಯ ಕರ್ಫ್ಯೂಗೆ ಜಿಲ್ಲೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ನಗರದ ಜನತಾ ಬಜಾರ್, ಗಾಂಧಿ ಮಾರುಕಟ್ಟೆ, ಹಳೇಹುಬ್ಬಳ್ಳಿ ಸೇರಿ ನಗರದ ವಿವಿಧೆಡೆ ಕಿರಾಣಿ ಅಂಗಡಿಗಳು, ಬೇಕರಿ, ಹಾಲು, ಹಣ್ಣು, ತರಕಾರಿ, ಹೂವು ಅಂಗಡಿಗಳು ಎಂದಿನಂತೆ ತೆರೆದಿದ್ದು, ಗ್ರಾಹಕರ ಸಂಖ್ಯೆ ಕೂಡಾ ಅಲ್ಪಸ್ವಲ್ಪ ಇತ್ತು. ತಳ್ಳುವ ಗಾಡಿಗಳಲ್ಲಿ ಹೂವು, ಹಣ್ಣಿನ ವ್ಯಾಪಾರ ಇಲ್ಲದೆ ಮಾರುಕಟ್ಟೆಗಳು ಕಾಲಿ ಇದ್ದವು.

ರವಿವಾರವಾಗಿದ್ದರಿಂದ ಸರ್ಕಾರಿ ಕಚೇರಿಗಳು, ಶಾಲೆ, ಕಾಲೇಜುಗಳಿಗೆ ರಜೆ ಇತ್ತು. ಆಸ್ಪತ್ರೆಗಳು, ಔಷಧ ಅಂಗಡಿಗಳು ಕಾರ್ಯನಿರ್ವಹಿಸಿದವು.
ಹೋಟೆಲ್‌, ರೆಸ್ಟೋರಂಟ್‌ಗಳಲ್ಲಿ ಪಾರ್ಸೆಲ್‌ಗೆ ಅವಕಾಶ ಕಲ್ಪಿಸಲಾಗಿತ್ತು. ಬಟ್ಟೆ ಅಂಗಡಿಗಳು, ಚಿನ್ನಾಭರಣ, ಪಾತ್ರೆ ಅಂಗಡಿಗಳು, ವಾಣಿಜ್ಯ ಮಳಿಗೆಗಳು, ಮಾಲ್‌ಗಳು, ಮದ್ಯದ ಅಂಗಡಿಗಳು ಬಂದ್‌ ಆಗಿದ್ದವು.

ವಾರಾಂತ್ಯ ಕರ್ಫ್ಯೂ ವೇಳೆ ಬಸ್, ಆಟೊ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರೂ, ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇರಲಿಲ್ಲ. ವಾರಾಂತ್ಯ ಕರ್ಫ್ಯೂ ನಿಮಿತ್ತ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.

Tags:

error: Content is protected !!