ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಸೈನಿಕರು ಹಾಗೂ ಮಾಜಿ ಸೈನಿಕರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಮಾಜಿ ಸೈನಿಕ ಕಲ್ಯಾಣ ಸಂಘ ಕಡೋಲಿ, ವತಿಯಿಂದ ಬೆಳಗಾವಿಯ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ನಗರ ಪ್ರದೇಶಗಳಲ್ಲಿ ವಾಸಿಸುವ ಸೈನಿಕರು ಹಾಗೂ ಮಾಜಿ ಸೈನಿಕರಿಗೆ ಮನೆ ಹಾಗೂ ನೀರಿನ ಕರಗಳಲ್ಲಿ ವಿನಾಯಿತಿ ನೀಡುತ್ತಿರುವಂತೆ ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ಸೈನಿಕರು ಹಾಗೂ ಮಾಜಿ ಸೈನಿಕರಿಗೆ ಮನೆ ಹಾಗೂ ನೀರಿನ ಕರಗಳಲ್ಲಿ ವಿನಾಯಿತಿಯನ್ನು ನೀಡಬೇಕು. ಗ್ರಾಮ ಪಂಚಾಯತಗಳಲ್ಲಿ ಮಾಜಿ ಸೈನಿಕರಿಗೆ ಸದಸ್ಯ ಸ್ಥಾನಗಳನ್ನು ಕಾಯ್ದಿರಿಸಬೇಕು. ಮತ್ತು ಆಶ್ರಯ ಯೋಜನೆಯಡಿ ಮಾಜಿ ಸೈನಿಕರಿಗೂ ಮನೆಗಳನ್ನು ಮಂಜೂರು ಮಾಡಬೇಕೆಂದು ಮಾಜಿ ಸೈನಿಕ ಕಲ್ಯಾಣ ಸಂಘ ಕಡೋಲಿ, ಹಾಗೂ ಮಾಜಿ ಸೈನಿಕರ ಅಸೋಸಿಯೇಶನ್ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸೈನಿಕರಾದ ನಾರಾಯಣ ರಾಣು ಬಸರ್ಗಿ, ಸೈನಿಕರು ಹಾಗೂ ಮಾಜಿ ಸೈನಿಕರು ದೇಶಕ್ಕಾಗಿ ತಮ್ಮ ಸೇವೆಯನ್ನು ಸಲ್ಲಿಸಿರುತ್ತಾರೆ. ಹಾಗಾಗಿ ಅವರಿಗೆ ಮನೆ ಕರ ಹಾಗೂ ನೀರಿನ ಕರಗಳಲ್ಲಿ ವಿನಾಯಿತಿ ನೀಡಬೇಕು. ಗ್ರಾಮ ಪಂಚಾಯತ ಸದಸ್ಯ ಸ್ಥಾನಗಳಲ್ಲಿ ಮೀಸಲಾತಿಯನ್ನು ಒಡಗಿಸಬೇಕು. ಇನ್ನು ಆಶ್ರಯ ಮನೆ ಯೋಜನೆಯಲ್ಲಿ ಸೈನಿಕರು ಹಾಗೂ ಮಾಜಿ ಸೈನಿಕರಿಗೆ ಅವಕಾಶ ನೀಡಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಸೈನಿಕ ಕಲ್ಯಾಣ ಸಂಘದ ಜಿಲ್ಲಾಧ್ಯಕ್ಷರಾದ ಮಹಾದೇವ ಪುರಗಾಳೆ, ಉಪಾಧ್ಯಕ್ಷರಾದ ಬಾಬು ಬಾಳೇಕುಂದ್ರಿ, ನಾರಾಯಣ ರಾಣುಬಸರ್ಗೆ, ಕಲ್ಲಪ್ಪ ಪಾಟೀಲ್ ಸೇರಿದಂತೆ ಸಂಘದ ಪದಾಧಿಕಾರಿಗಳು ಸೇರಿದಂತೆ ಇನ್ನೂ ಹಲವರು ಉಪಸ್ಥಿತರಿದ್ದರು.