ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲಿರುವದ್ರಿಂದ ರಾಜ್ಯ ಸರಕಾರವು ಇಂದು ರಾತ್ರಿಯಿಂದ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯ
ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಎಸ್ಪಿ ಆನಂದ ಕುಮಾರ ಮಾಹಿತಿ ನೀಡಿದ್ದು ಸರ್ಕಾರದ ನಿಯಮವನ್ನು ಸಾರ್ವಜನಿಕರು ಕಟ್ಟು ನಿಟ್ಟಾಗಿ ಪಾಲಿಸಿ ಪೊಲೀಸರ ಜೊತೆ ಸಹಕರಿಸಲು ಮನವಿ ಮಾಡಿದ್ದಾರೆ.

ವಿಜಯಪುರ ದಲ್ಲಿ ಮಾದ್ಯಮಗಳ ಜೊತೆ ಮಾತನಾಡಿ ಇಂದು ಸಂಜೆ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಕಪ್ರ್ಯೂ ಜಾರಿಯಲ್ಲಿ ಇರುತ್ತದೆ. ವಿನಾಕಾರಣ ಹೊರಗಡೆ ಬಂದ್ರೆ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ನಿಮ್ಮ ಆರೋಗ್ಯದ ಜೊತೆಗೆ ನಿಮ್ಮ ಕುಟುಂಬದ ಆರೋಗ್ಯವು ಸೇರಿದಂತೆ ಸಮಾಜದ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಆದ್ದರಿಂದ ಪೊಲೀಸರ ಜೊತೆ ಸಹಕರಿಸಿ ಎಂದು ಮನವಿ ಮಾಡಿದರು.