ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರಿಗೆ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕೋವಿಡ್-19 ಲಘು ಲಕ್ಷಣಗಳು ಕಾಣಿಸಿದ ಕಾರಣ ನಾನು ಇಂದು ಪರೀಕ್ಷೆಗೆ ಒಳಪಟ್ಟಿದ್ದು, ಕೋವಿಡ್-19 ವರದಿ ಪಾಸಿಟಿವ್ ಬಂದಿದೆ ಎಂದು ಸ್ವತಃ ಅವರೇ ಸ್ಪಷ್ಟಪಡಿಸಿದ್ದಾರೆ.

ಟ್ವೀಟ್ ಮೂಲಕ ಮಾಹಿತಿ ನೀಡಿರುವ ಸಚಿವ ಬಿ.ಸಿ.ನಾಗೇಶ್ ಅವರು ಕ್ವಾರಂಟೈನ್‍ನಲ್ಲಿದ್ದು ಅಗತ್ಯ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ.