ಹಾಡ ಹಗಲೇ ಮಹಿಳೆ ಓರ್ವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಧಾರುಣ ಘಟನೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.

ಸಂಕೇಶ್ವರ ಪಟ್ಟಣದ ನಿವಾಸಿ ಶೈಲಾ ನಿರಂಜನ ಸುಭೇದಾರ(56) ಗುಂಡಿನ ದಾಳಿಗೆ ಒಳಗಾಗಿ ಸಾವನ್ನಪ್ಪಿರುವ ಮಹಿಳೆ ಎಂದು ಗುರುತಿಸಲಾಗಿದೆ. ಆರೋಪಿಗಳು ಮಹಿಳೆಯ ತಲೆಗೆ ಪಿಸ್ತೂಲಿನಿಂದ ಶೂಟ್ ಮಾಡಿ ಹತ್ಯೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈಗಾಗಲೇ ಸ್ಥಳಕ್ಕೆ ಸಂಕೇಶ್ವರ ಪೆÇಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಕೊಲೆಯಾದ ಮಹಿಳೆ ಅಕ್ರಮವಾಗಿ ಬಡ್ಡಿ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗುತ್ತಿದೆ. ಕೊಲೆಗೆ ಬಡ್ಡಿ ವ್ಯವಹಾರ ಕಾರಣ ಇರಬಹುದು ಎಂದು ಪೆÇಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಂಕೇಶ್ವರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.