ಪಂಚಾಯತರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಸಚಿವ ಮುರಗೇಶ್ ನಿರಾಣಿಯವರನ್ನು ಭೇಟಿ ಮಾಡಿ ಅಭಿದ್ಧಿ ಕಾರ್ಯಗಳನ್ನು ಕುರಿತಂತೆ ಚರ್ಚೆ ನಡೆಸಿದರು.

ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವವರಾದ ಶ್ರೀ ಕೆ ಎಸ್ ಈಶ್ವರಪ್ಪ ರವರು ವಿಧಾನ ಸೌಧದ ಕಚೇರಿಯಲ್ಲಿ ಮಾನ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಶ್ರೀ ಮುರಗೇಶ್ ನಿರಾಣಿಯವರನ್ನು ಇಂದು ಭೇಟಿ ಮಾಡಿ ಜಿಲ್ಲೆಯ ಕೈಗಾರಿಕಾ ಅಭಿವೃದ್ಧಿ ಕುರಿತು ಸುದೀರ್ಘವಾಗಿ ಚರ್ತಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಷತ್ ಸದಸ್ಯರಾದ ಶ್ರೀ ರುದ್ರೆಗೌಡ, ಸೂಡಾ ಅಧ್ಯಕ್ಷರಾದ ಶ್ರೀ ಜ್ಯೋತಿ ಪ್ರಕಾಶ್ , ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ಶ್ರೀ ಗೋಪಿನಾಥ್ ಎನ್. ಕಾರ್ಯದರ್ಶಿ ವಸಂತ ಹೊಬಲಿದಾರ್ , ಜಂಟಿ ಕಾರ್ಯದರ್ಶಿ ಶ್ರೀ ವಿಜಯಕುಮಾರ್, ಶ್ರೀ ಸುಕುಮಾರ್, ಶ್ರೀ ರಾಜು ಮುಂತಾದವರು ಉಪಸ್ಥಿತರಿದ್ದರು.