ಸಿಎಂ ಸಮ್ಮುಖದಲ್ಲೇ ಸಚಿವ ಅಶ್ವತ್ಥ ನಾರಾಯಣ, ಸಂಸದ ಡಿಕೆ ಸುರೇಶ್ ಮಧ್ಯೆ ವಾಕ್ಸಮರ ನಡೆದಿದೆ. ಇನ್ನು ಡಾ.ಅಶ್ವತ್ಥನಾರಾಯಣ್ ವೇದಿಕೆಯಲ್ಲೇ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಧರಣಿ ನಡೆಸಿದ್ದಾರೆ.

ರಾಮನಗರದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮ ವೇಳೆ ಸಚಿವ, ಸಂಸದರ ಗಲಾಟೆ ನಡೆದಿದೆ. ಮುಖ್ಯಮಂತ್ರಿಗಳ ಸಮ್ಮುಖದಲ್ಲೇ ಡಾ.ಅಶ್ವತ್ಥ್ ನಾರಾಯಣ, ಸಂಸದ ಡಿ.ಕೆ.ಸುರೇಶ್ ಮಧ್ಯೆ ಗಲಾಟೆ ಉಂಟಾಗಿದೆ. ಸಚಿವ ಡಾ.ಅಶ್ವತ್ಥ್ ನಾರಾಯಣ್ ಜಿಲ್ಲೆಯ ಅಭಿವೃದ್ಧಿ ಬಿಜೆಪಿಯ ಕಾಲದಲ್ಲೇ ಆಗಿದ್ದು ಎಂದು ಹೇಳುತ್ತಿದ್ದ ವೀರಾವೇಶದ ಭಾಷಣಕ್ಕೆ ಡಿ.ಕೆ.ಸುರೇಶ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಹಲವಾರು ಯೋಜನೆಗಳಿಗೆ ನಮ್ಮ ಕಾಲದಲ್ಲೇ ಅಡಿಗಲ್ಲು, ನಮ್ಮ ಕಾಲದಲ್ಲೇ ಉದ್ಘಾಟನೆ, ನಮ್ಮ ಸರ್ಕಾರದಲ್ಲಿ ಬೇರೆ ಸರ್ಕಾರದ ರೀತಿ ಅಲ್ಲ ಎಂದು ಅಶ್ವತ್ಥ್ ನಾರಾಯಣ ವೀರಾವೇಶದ ಭಾಷಣ ಮಾಡಿದ್ದಾರೆ. ನೀರಾವರಿ ಯೋಜನೆ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ. ನಮ್ಮ ಅಭಿವೃದ್ಧಿ ಮಾಡಿಕೊಳ್ಳುವುದನ್ನು ಮಾತ್ರ ಮಾಡಿಕೊಳ್ಳಲ್ಲ ಎಂದು ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಈ ವೇಳೆ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸಚಿವ ಅಶ್ವತ್ಥ್ ನಾರಾಯಣ ಜತೆ ಡಿ.ಕೆ.ಸುರೇಶ್ ವಾಕ್ಸಮರ ನಡೆದಿದೆ. ಅಶ್ವತ್ಥ್ ಬಳಿಯಿದ್ದ ಮೈಕ್ ಎಂಎಲ್‍ಸಿ ರವಿ ಹಿಡಿದು ಎಳೆದಾಡಿದ್ದಾರೆ. ಈ ವೇಳೆ ಸಚಿವ ಅಶ್ವತ್ಥ್ ಭಾಷಣ ವಿರೋಧಿಸಿ ವೇದಿಕೆಯಲ್ಲೇ ಕುಳಿತು ಕೈ ಸಂಸದ ಡಿ.ಕೆ.ಸುರೇಶ್ ಧರಣಿ ಮಾಡಿದ್ದಾರೆ.
ತದನಂತರ ಘಟನೆಯನ್ನು ಕುರಿತಂತೆ ಮಾತನಾಡಿದ ಸಂಸದ ಡಿಕೆ ಸುರೇಶ್ ಮಂತ್ರಿಗಳು ಮಂತ್ರಿಗಳ ರೀತಿ ನಡೆದುಕೊಳ್ಳಲಿಲ್ಲ. ಸಚಿವರು ಸವಾಲೆಸೆದು ಕರೆದಾದ ಸುಮ್ಮನೆ ಕೂರಲು ಆಗಲಿಲ್ಲ. ಇದು ರಾಜ್ಯ ಸರ್ಕಾರದ ವತಿಯಿಂದ ನಡೆದ ಕಾರ್ಯಕ್ರಮ. ಆದರೆ, ಇದು ಬಿಜೆಪಿ ಕಾರ್ಯಕ್ರಮದಂತೆ ಕಾಣುತ್ತಿತ್ತು. ರಾಮನಗರ ಜಿಲ್ಲಾ ಪಂಚಾಯತ್ ವತಿಯಿಂದ ಅನುದಾನ ಪಡೆದಿದ್ದಾರೆ. ಇಲ್ಲಿ ಹಾಕಿರುವ ಎಲ್ಲಾ ಕಲ್ಲುಗಳನ್ನು ನಾವು ತಂದಿದ್ದೆವು. ಸಚಿವರು ಎಲ್ಲವನ್ನು ನಾವೇ ಮಾಡಿದ್ದೇವೆಂದು ವೀರಾವೇಷ ಪ್ರದರ್ಶಿಸಿದಾಗ ಸುಮ್ಮನಿರಲಾಗಲಿಲ್ಲ. ಸಿಎಂ ಸಮ್ಮುಖದಲ್ಲಿ ವೇದಿಕೆಯಲ್ಲೇ ಅವರಿಗೆ ಉತ್ತರ ಕೊಟ್ಟಿದ್ದೇವೆ ಎಂದರು.
ಇನ್ನು ಕಾರ್ಯಕ್ರಮದಲ್ಲಿ ನಡೆದ ಘಟನೆ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿಯವರು, ಕಾರ್ಯಕ್ರಮದ ವೇಳೆ ಈ ರೀತಿಯ ಘಟನೆ ನಡೆಯಬಾರದಿತ್ತು. ಅಚಾತುರ್ಯದಿಂದ ನಡೆದು ಹೋಯಿತು. ಆದರೆ ಇದೇನು ಜಿಲ್ಲೆಯ ಅಭಿವೃದ್ಧಿ ಮೇಲೆ ಪರಿಣಾಮ ಬೀರಲ್ಲ. ನಾವು ರಾಜ್ಯದ ಅಭಿವೃದ್ಧಿ ಜೊತೆಗೆ ರಾಮನಗರ ಜಿಲ್ಲೆಯ ಅಭಿವೃದ್ಧಿಯನ್ನೂ ಮಾಡುತ್ತೇವೆ ಎಂದರು.
ಇನ್ನು ಸಚಿವರು ಹಾಗೂ ಸಂಸದರ ನಡುವಿನ ಜಟಾಪಟಿ ಈಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇನ್ನು ಕೈ ಕಮಲ ನಾಯಕರ ನಡುವೆ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗದಿರಲಿ ಎಂಬುದು ಎಲ್ಲರ ಆಶಯ.