ಬೆಳಗಾವಿಯಲ್ಲಿ ಫ್ರಂಟಲೈನ್ ವಾರಿಯರ್ಸ ಹಾಗೂ ಹಿರಿಯ ನಾಗಕರಿಗೆ ನೀಡುತ್ತಿರುವ ಬೂಸ್ಟರ್ ಡೋಸ್ ಅಭಿಯಾನಕ್ಕೆ ದಕ್ಷಿಣ ಶಾಸಕ ಅಭಯ್ ಪಾಟೀಲ್ ಚಾಲನೆ ನೀಡಿದರು.

ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬರುವ ಹೊಸೂರ ಬಸವನ ಗಲ್ಲಿಯಲ್ಲಿರುವ ಆರೋಗ್ಯ ಕೇಂದ್ರದಲ್ಲಿ ಬೂಸ್ಟರ್ ಡೋಸ್ ನೀಡುವ ಕಾರ್ಯಕ್ರಮವನ್ನು ಶಾಸಕ ಅಭಯ್ ಪಾಟೀಲ್ ಉದ್ಘಾಟಿಸಿದರು. ನಂತರ ಮಾತನಾಡಿದ ಅಭಯ್ ಪಾಟೀಲ್ ಬೆಳಗಾವಿಯಲ್ಲಿ ಕೋವಿಡ್ ಲಸಿಕಾ ಅಭಿಯಾನ ಯಶಸ್ವಿಗೊಳಿಸಲು ರಜೆಯನ್ನು ತೆಗೆದುಕೊಳ್ಳಲಾರದೇ ಕರ್ತವ್ಯ ನಿರ್ವಹಿಸಿದ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಇದೀಗ ಬೂಸ್ಟರ್ ಡೋಸ್ ಅಭಿಯಾನವನ್ನು ಎಲ್ಲರೂ ಕೂಡಿಕೊಂಡು ಯಶಸ್ವಿಗೊಳಿಸಬೇಕು. ದಕ್ಷಿಣ ಮತಕ್ಷೇತ್ರದ 10 ಸ್ಥಳಗಳಲ್ಲಿ ಬೂಸ್ಟರ ಡೋಸ್ ನೀಡುವ ಕೇಂದ್ರ ತೆರೆಯಲಾಗಿದೆ. ಇವುಗಳ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಡಿಎಚ್‍ಓ ಡಾ.ಎಸ್.ವ್ಹಿ.ಮುನ್ಯಾಳ ಸೇರಿದಂತೆ ಹಲವು ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿ, ಸ್ಥಳೀಯರು ಉಪಸ್ಥಿತರಿದ್ದರು.