COVID-19

ಕೊರೊನಾ, ಒಮಿಕ್ರಾನ್ ಭೀತಿ: ನಿಪ್ಪಾಣಿಯಲ್ಲಿ ಪೊಲೀಸ್ ಹೈಅಲರ್ಟ

Share

ಮಹಾರಾಷ್ಟ್ರದಲ್ಲಿ ಕೊರೊನಾ ಮತ್ತು ಒಮಿಕ್ರಾನ್ ಹೆಚ್ಚಾಗಿರುವ ಹಿನ್ನೆಲೆ ಗಡಿ ತಾಲೂಕು ನಿಪ್ಪಾಣಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಎಲ್ಲರೂ ಕೋವಿಡ್ ನಿಯಮವನ್ನು ಪಾಲಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಸೂಚನೆ ಕೊಡುತ್ತಿದ್ದಾರೆ.
ಹೌದು ಮಹಾರಾಷ್ಟ್ರದಲ್ಲಿ ಕೊರೊನಾ ಮತ್ತು ವಿದೇಶಿ ಹೊಸ ತಳಿ ಒಮಿಕ್ರಾನ್ ಹೆಚ್ಚಾಗಿರುವುದು ಸಧ್ಯ ರಾಜ್ಯದ ಗಡಿ ಭಾಗಗಳಲ್ಲಿ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಜಿಲ್ಲಾಡಳಿತದ ಸೂಚನೆ ಮೇರೆಗೆ ನಿಪ್ಪಾಣಿಯಲ್ಲಿ ಸಿಪಿಐ ಸಂಗಮೇಶ ಶಿವಯೋಗಿ ನೇತೃತ್ವದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತಿದೆ. ಕೊರೊನಾ ಸೋಂಕು ಮತ್ತು ಒಮಿಕ್ರಾನ್ ಕೇಸ್‍ಗಳು ಹೆಚ್ಚಾಗಿರುವ ಹಿನ್ನೆಲೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕಾಲ ಕಾಲಕ್ಕೆ ಸ್ಯಾನಿಟೈಜರ್ ಬಳಸಬೇಕು. ಮಾಸ್ಕ್ ಧರಿಸದೇ ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದರು.
ಒಟ್ಟಿನಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಂಡು ಕೊರೊನಾ ಮತ್ತು ಒಮಿಕ್ರಾನ್ ಬಗ್ಗೆ ಹೆಚ್ಚು ಜಾಗೃತಿ ವಹಿಸುವ ಅವಶ್ಯಕತೆಯಿದೆ

Tags:

error: Content is protected !!