Vijaypura

*15 ರಿಂದ18 ವಿದ್ಯಾರ್ಥಿಗಳಿಗೆ ಲಸಿಕೆ: ರವೀಂದ್ರನಾಥ ಠಾಗೋರ್ ಕಾಲೇಜಿನಲ್ಲಿ ಉತ್ಸಾಹದಿಂದ ಲಸಿಕೆ ಪಡೆದ ವಿದ್ಯಾರ್ಥಿಗಳು*

Share

ಇಂದು ದೇಶಾದ್ಯಂತ 15 ವರ್ಷದಿಂದ 18 ವರ್ಷದೊಳಗಿನ ವರಿಗೆ ಕೊವಿಡ್ ಲಸಿಕೆ ನೀಡುವ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಡಳಿತದಿಂದ ಲಸಿಕೆ ನೀಡಲು ಕ್ರಮ ವಹಿಸಲಾಗಿದೆ. ವಿಜಯಪುರ ನಗರದ ರವೀಂದ್ರನಾಥ ಠಾಗೋರ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಲಸಿಕೆ ಪಡೆಯುತ್ತಿದ್ದಾರೆ‌.

ಆಧಾರ ಕಾರ್ಡ್ ಹಾಗೂ ಕಾಲೇಜು ಐಡಿ ಕಾರ್ಡ್ ತೋರಿಸಿ ಲಸಿಕೆ ಪಡೆಯುತ್ತಿದ್ದು ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತಿದೆ‌. ಇನ್ನು ವಿದ್ಯಾರ್ಥಿಗಳು ಸಹ ಸರದಿ ಸಾಲಿನಲ್ಲಿ ನಿಂತು ಉತ್ಸಾಹದಿಂದ ಲಸಿಕೆ ಪಡೆಯುತ್ತಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ ಎಜ್ಯುಕೇಷನ್ ಸೊಸೈಟಿಯ ಚೇರ್ಮನ್ ಶಿವಾಜಿ ಗಾಯಕವಾಡ ಇವರು ವಿಶೇಷ ಆಸಕ್ತಿ ವಹಿಸಿ ಲಸಿಕೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಜಿಲ್ಲೆಯಲ್ಲಿ ಒಟ್ಟು 123438 ಮಕ್ಕಳಿಗೆ ಲಸಿಕೆ ನೀಡಲು ಗುರಿ ಹೊಂದಲಾಗಿದೆ. ಸದ್ಯ ಜಿಲ್ಲೆಯಲ್ಲಿ 85170‌ ಲಸಿಕೆ ಸಂಗ್ರಹಿಸಿಡಲಾಗಿದೆ. ಜಿಲ್ಲೆಯಲ್ಲಿ ಲಸಿಕೆ ನೀಡಲು 173 ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಮಾಹಿತಿ ನೀಡಿದ್ದಾರೆ‌‌.

Tags:

error: Content is protected !!