ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅವರು ಇಂದು ಕಾಮನ್ ವೆಲ್ತ್ ಕ್ರೀಡಾಕೂಟ- ಬಿಮಿರ್ಂಗ್ ಹ್ಯಾಮ್ 2022 – ಕ್ವೀನ್ಸ್ ಬ್ಯಾಟನ್ ರಿಲೇಗೆ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವರ್ಚುವಲ್ ಆಗಿ ಭಾಗವಹಿಸಿದರು.

2022 ನೇ ಸಾಲಿನ ಕಾಮನ್ ವೆಲ್ತ್ ಕ್ರಿಡಾಕೂಟವನ್ನು ರಾಜ್ಯಪಾಲರಾದ ಥಾವರ ಚಂದ ಗೆಹ್ಲೋಟ್ ಅವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರ್ಚುವಲ್ ಆಗಿ ಭಾಗವಹಿಸಿ ಮಾತನಾಡಿದ ಅವರು ಓಲಂಪಿಕ್ಸ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜೀತೋ ಇಂಡಿಯಾ ಸ್ಲೋಗನ್ ನೀಡಿದ್ದು, ಈ ಸ್ಲೋಗನ್ ಕ್ರೀಡಾ ಪಟುಗಳಿಗೆ ಅತ್ಯಂತ ಸ್ಪೂರ್ತಿದಾಯಕವಾಗಿದೆ. ಈ ನಿಟ್ಟಿನಲ್ಲಿ ಕ್ರೀಡಾ ಪಟುಗಳು ಟೋರ್ಕಿಯೋ ಓಲಂಪಿಕ್ಸ್ ನಲ್ಲಿ ಅತಿ ಹೆಚ್ಚು ಪದಕಗಳನ್ನು ಗೆದ್ದಿದ್ದು,
ಕ್ರೀಡಾ ಪಟುಗಳಿಗೆ ಸ್ಪೂರ್ತಿ ಅತ್ಯಂತ ಮುಖ್ಯವಾಗಿದೆ. ಪ್ರಧಾನ ಮಂತ್ರಿಗಳ ಈ ಕಾರ್ಯಕ್ರಮ ಭಾರತಕ್ಕೆ ಸ್ವತಂತ್ರ ಬಂದ ಮೇಲೆ ಈ ಮೊದಲು ಯಾವುದೇ ಪ್ರಧಾನ ಮಂತ್ರಿಗಳು ಮಾಡಿಲ್ಲ ಎಂದು ಮೆಚ್ಚುಗೆ ವ್ಯಕ್ತ ಪಡಿಸಿದರು.
ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ಅತಿ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜೀತೋ ಇಂಡಿಯಾ ಸ್ಲೋಗನ್ ಮೂಲಕ ಕ್ರೀಡಾಪಟುಗಳಿಗೆ ಸ್ಪೂರ್ತಿದಾಯಕವಾಗಿದೆ.