ಆರ್ಥಿಕವಾಗಿ, ಆಡಳಿತದ ದೃಷ್ಟಿಯಿಂದ 2022 ಸವಾಲಿನ ವರ್ಷವಾಗಿದ್ದು, ಇದನ್ನು ಎಲ್ಲರೂ ಒಗ್ಗೂಡಿ ಸಮರ್ಥವಾಗಿ ಎದುರಿಸುವ ಸಂಕಲ್ಪ ಮಾಡಬೇಕಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹೊಸವರ್ಷದ ಸಂದರ್ಭದಲ್ಲಿ ಅಧಿಕಾರಿಗಳಿಗೆ ಶುಭಾಶಯ ಕೋರಿ ಸಿಎಂ ಬೊಮ್ಮಾಯಿ ಮಾತನಾಡಿದರು. ಕೋವಿಡ್ ಸಂಭಾವ್ಯ ಮೂರನೇ ಅಲೆಗೆ ನಾವು ಸಿದ್ಧರಾಗಬೇಕಾಗಿದೆ. ಜೊತೆಗೆ ಆರ್ಥಿಕತೆಯೂ ಮುನ್ನಡೆಯಬೇಕಾಗಿದೆ. ಕೇವಲ ನಿಬರ್ಂಧಗಳನ್ನು ಜಾರಿಗೊಳಿಸಿ ಸುಮ್ಮನಿರಲಾಗದು. ನಾವು ಈ ಸವಾಲನ್ನು ವಿಭಿನ್ನ ಕಾರ್ಯತಂತ್ರದಿಂದ ಎದುರಿಸಬೇಕು. ಇದಕ್ಕಾಗಿ ಹೆಚ್ಚಿನ ಶ್ರಮ ವಹಿಸಿ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು.
ನಿಮ್ಮ ಇಲಾಖೆಯಲ್ಲಿ ಅನವಶ್ಯಕ ವೆಚ್ಚ ಕಡಿತಗೊಳಿಸಿ. ತೆರಿಗೆ ಸಂಗ್ರಹ ಇಲಾಖೆಗಳು ಇನ್ನಷ್ಟು ದಕ್ಷತೆಯಿಂದ ಕಾರ್ಯನಿರ್ವಹಿಸಿ ರಾಜ್ಯದ ಆರ್ಥಿಕತೆಯನ್ನು ಉತ್ತಮ ಪಡಿಸಬೇಕು. ಸಕಾರಾತ್ಮಕ ಭಾವನೆಯಿಂದ ಈ ಸವಾಲು ಎದುರಿಸಬೇಕು. ಉತ್ತಮ ಚಿಂತನೆ ಉತ್ತಮ ಕೆಲಸಗಳಿಗೆ ಎಡೆ ಮಾಡುತ್ತವೆ. ಉತ್ತಮ ಕೆಲಸಗಳು ಉತ್ತಮ ಜೀವನಕ್ಕೆ ದಾರಿ. ಆದ್ದರಿಂದ ಸಕಾರಾತ್ಮಕವಾಗಿ ಯೋಚಿಸಿ, ನಿಮ್ಮ ಕೆಲಸವನ್ನು ಪ್ರೀತಿಸಿ. ಆಗ ಫಲಿತಾಂಶ ಉತ್ತಮವಾಗಿರುತ್ತದೆ ಎಂದು ಸಲಹೆ ನೀಡಿದರು. ಕಳೆದ 5 ತಿಂಗಳಲ್ಲಿ ಆಡಳಿತದಲ್ಲಿ ಅತಿ ಕಡಿಮೆ ಹಸ್ತಕ್ಷೇಪ ಮಾಡಿದ ಸರ್ಕಾರ ನಮ್ಮದು. ನೀವು ಸ್ವತಃ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಿ. ನಿಮ್ಮ ಅನುಭವದ ಫಲ ರಾಜ್ಯದ ಬಡ ಜನತೆಗೆ ಅನುಕೂಲ ಮಾಡಿಕೊಡಲಿ ಎಂದು ಹಾರೈಸಿದರು.
ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ರಾಜ್ಯ ಪೆÇಲೀಸ ಮಹಾ ನಿರ್ದೇಶಕ ಪ್ರವೀಣ ಸೂದ್ ಮತ್ತು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.