Athani

2023 ರಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಸತೀಶ್ ಜಾರಕಿಹೊಳಿ

Share

ಈಚೆಗೆ ನಡೆದ ಎಂಎಲ್ ಸಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದು, ಇದಕ್ಕೆ ಸ್ಥಳೀಯ ಮಟ್ಟದ ಕಾರ್ಯಕರ್ತರ ಒಗ್ಗಟ್ಟು ಕಾರಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.

ಗೋಕಾಕ ನ ಹಿಲ್ ಗಾರ್ಡನ್ ಕಚೇರಿಯ ಅಥಣಿ ಪುರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು, ಕಳೆದ 15 ವರ್ಷಗಳ ನಂತರ ಅಥಣಿ ಪುರಸಭೆಯಲ್ಲಿ ಕಾಂಗ್ರೆಸ್ ಬಾವುಟ ಹಾರಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಕೂಡ ಕಾಂಗ್ರೆಸ್ ಪರ ಅಲೆ ಬೀಸುತ್ತಿದೆ. ಆದ್ದರಿಂದ ಕಾರ್ಯಕರ್ತರು ಒಗ್ಗಟ್ಟಾಗಿ ಪಕ್ಷ ಸಂಘಟಿಸಬೇಕು. 2023 ರಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಮಾತನಾಡಿ, ಕಳೆದ 18 ವರ್ಷದ ನಂತರ ಅಥಣಿ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಹುಮತ ದೊರೆತಿದ್ದು, ಇದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಜಿಲ್ಲೆಯ ಮುಖಂಡರು, ಕಾರ್ಯಕರ್ತರು ಕಾರಣ ಪುರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ 15 ಅಭ್ಯರ್ಥಿಗಳು ಒಗ್ಗಟ್ಟಾಗಿ ಅಥಣಿ ತಾಲೂಕಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಪಕ್ಷವನ್ನು ಇನ್ನಷ್ಟು ಸಂಘಟಿಸೋಣ ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ , ಮುಖಂಡರಾದ ಸದಾಶಿವ ಬೂಟಾಳಿ, ಅನಿಲ ಶಿಂದೋಳಿ, ರಮೇಶ ಶಿಂದಗಿ, ಶ್ರೀಕಾಂತ ಪೂಜಾರಿ, ಸಿದ್ಧಾರ್ಥ ಸಿಂಗೆ, ಅರ್ಸದ ಗದ್ಯಾಳ, ಬಾಬು ಕೆಂಬಾಲಪುರ, ರಾವಸಾಬ್ ಐಹೊಳೆ, ಅಸ್ಲಮ್ ನಾಲಬಂದ ಹಾಗೂ ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.

Tags:

error: Content is protected !!