ತಂದೆಯೊಬ್ಬ ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮದುವೆಗಾಗಿ 8 ಲಕ್ಷ ರೂ.ಗೆ ಮಾರಾಟ ಮಾಡಿದ್ದ ಅಮಾನವೀಯ ಘಟನೆ ರಾಜಸ್ಥಾನದ ಬರಾನ್ ಜಿಲ್ಲೆಯಲ್ಲಿ ನಡೆದಿದೆ.

ಹೌದು ರಾಜಸ್ಥಾನದ ಬರಾನ್ ಜಿಲ್ಲೆಯ ಛಿಪಬರೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಕಂಡು ಬಂದಿದ್ದು. ಡಿಸೆಂಬರ್ 22ರಂದು ಅಪ್ರಾಪ್ತ ಬಾಲಕಿಯೊಬ್ಬಳು ತನ್ನ ತಂದೆಯಿಂದ ಹಣ ಪಡೆದು ತನಗೆ ಮತ್ತು ತನ್ನ ತಂಗಿಗೆ ಮದುವೆ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ನವೆಂಬರ್ 13ರಂದು ಬದ್ರಿಲಾಲ್ ಮತ್ತು ಸುರೇಶ್ ಮಾರುತಿ ಎಂಬುವವರು ವ್ಯಾನ್‍ನಲ್ಲಿ ಮನೆಗೆ ಬಂದು, ವ್ಯಾನ್‍ನಲ್ಲಿ ಇಬ್ಬರನ್ನು ಅವರೊಂದಿಗೆ ಕರೆದುಕೊಂಡು ಹೋಗಿದ್ದರು. ಬದ್ರಿಲಾಲ್ ಬಾಲಕಿ ಮೀನಾಗೆ ದೈಹಿಕವಾಗಿ ಹಿಂಸೆ ಕೊಟ್ಟಿದ್ದು, ಸುರೇಶ ಮೀನಾ ತಂಗಿಯನ್ನು ತನ್ನ ಮನೆಗೆ ಕರೆದೊಯ್ದು ಕೋಣೆಯಲ್ಲಿ ಕೂಡಿ ಹಾಕಿ ಚಿತ್ರಹಿಂಸೆ ಕೊಟ್ಟಿದ್ದನಂತೆ. ತನಗಾದ ಹಿಂಸೆಯ ಬಗ್ಗೆ ಅಪ್ರಾಪ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಬಾಲಕಿ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಸಧ್ಯ ಬಾಲಕಿಯರ ತಂದೆಯನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನುಳಿದ ಆರೋಪಿಗಳಿಗೆ ಬಲೆ ಬೀಸಿದ್ದೇವೆ ಎಂದು ಬರನ್ ಪೊಲೀಸ್ ವರಿಷ್ಠಾಧಿಕಾರಿ ಕಲ್ಯಾಣಮಲ್ ಮೀನಾ ಮಾಹಿತಿ ನೀಡಿದ್ದಾರೆ.