ವಿಜಯಪುರದ ಯೋಧ ಸಾವನ್ನಪ್ಪಿದ್ದಾರೆ ಅಪಘಾತದಲ್ಲಿ ಗಾಯಗೊಂಡಿದ್ದ ಯೋಧ ಸಾವನ್ನಪ್ಪಿದ್ದು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ತಂಗಡಗಿ ಗ್ರಾಮದ ಬಸವರಾಜ್ ಡೂಂಗರಗಾವಿ ಸಾವನ್ನಪ್ಪಿದ ಯೋಧರಾಗಿದ್ದಾರೆ.

ಇವರು ರಜೆ ಮೇಲೆ ಊರಿಗೆ ಬಂದಾಗ ಅಪಘಾತದಲ್ಲಿ ಗಾಯಗೊಂಡಿದ್ದರು. ಆಲಮಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. 8 ವರ್ಷಗಳ ಹಿಂದೆ ಸೇನೆಗೆ ನೇಮಕಗೊಂಡಿದ್ದ ಬಸವರಾಜ ಸಧ್ಯ ಬಿಹಾರ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕೆಲ ದಿನಗಳ ಹಿಂದೆ ರಜೆಯ ಮೇಲೆ ಊರಿಗೆ ಬಂದಿದ್ದ ಇವರಿಗೆ ಎರಡು ದಿನಗಳ ಹಿಂದೆ ಅಪಘಾತ ಸಂಭವಿಸಿತ್ತು. ಚಿಕಿತ್ಸೆ ಫಲಿಸದೆ ಯೋಧ ಸಾವನ್ನಪ್ಪಿದ್ದಾರೆ.
