ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಯವ್ಯಯ ಪೂರ್ವಭಾವಿ ಸಭೆಗಳನ್ನು ಇಂದು ಪ್ರಾರಂಭಿಸಿದ್ದು, ಮೊದಲಿಗೆ ಕಂದಾಯ ಇಲಾಖೆಯ ಸಭೆ ನಡೆಸಿದರು.

ಕಂದಾಯ ಸಚಿವ ಆರ್. ಅಶೋಕ್, ಯೋಜನಾ ಆಯೋಗದ ಉಪಾಧ್ಯಕ್ಷ ಬಿ. ಜೆ. ಪುಟ್ಟಸ್ವಾಮಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಂದಿತ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್. ಎನ್. ಪ್ರಸಾದ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
