ತಾತ್ಕಾಲಿಕ ಹಾಗೂ ಶಾಶ್ವತ ವಿಧಾನಗಳ ಕುರಿತು ಆರೋಗ್ಯ ಇಲಾಖೆಯ ವೈದ್ಯರಿಗೆ ಹಾಗೂ ಇಲಾಖೆಯ ಸಿಬ್ಬಂದಿಗಳಿಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಸುವರ್ಣ ವಿಧಾನಸೌಧದಲ್ಲಿ ಕುಟುಂಬ ಕಲ್ಯಾಣ ಯೋಜನೆಯಲ್ಲಿ ತಾತ್ಕಾಲಿಕ ಹಾಗೂ ಶಾಶ್ವತ ವಿಧಾನಗಳ ಕುರಿತು ಆರೋಗ್ಯ ಇಲಾಖೆಯ ವೈದ್ಯರಿಗೆ ಹಾಗೂ ಇಲಾಖೆಯ ಸಿಬ್ಬಂದಿಗಳಿಗೆ ಏರ್ಪಡಿಸಿದ ಒಂದು ದಿನದ ತರಬೇತಿ ಕಾರ್ಯಾಗಾರಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಚಾಲನೆ ನೀಡಿದರು. ಬಳಿಕ ಮಾತನಾಡಿದ ಜಿಲ್ಲಾಧಿಕಾರಿಗಳು ಕೋವಿಡ 19ರ ಸಾಂಕ್ರಾಮಿಕದಲ್ಲಿ ಜನಸಂಖ್ಯೆಯ ಸ್ಥಿರತೆಯನ್ನು ಕಾಪಾಡಲು ಕುಟುಂಬ ಕಲ್ಯಾಣ ಯೋಜನೆಗಳನ್ನು ಸಮುದಾಯದ ಕೊನೆಯ ಹಂತದವರೆಗೆ ಮುಟ್ಟಿಸಿದ ಇಲಾಖೆಯ ಸಿಬ್ಬಂದಿಯ ಸೇವೆಯನ್ನು ಶ್ಲಾಘಿಸಿದರು. ಇಂತಹ ಪುನರ ಮನನ ತರಬೇತಿಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಹಂತದಲ್ಲಿ ಆಗಬೇಕು ಎಂದು ತಿಳಿಸಿದರು.
ನಂತರ ಡಿಎಚ್‍ಓ ಡಾ.ಎಸ್.ವ್ಹಿ.ಮುನ್ಯಾಳ ಮಾತನಾಡಿ ಕುಟುಂಬ ಕಲ್ಯಾಣ ಕಾರ್ಯಕ್ರಮದಲ್ಲಿ ಅನೇಕ ಹೊಸ ಯೋಜನೆಗಳು ಬಂದಿದ್ದು ಅವುಗಳನ್ನು ಸರಿಯಾದ ರೀತಿಯಲ್ಲಿ ಅರ್ಹ ಫಲಾನುಭವಿಗಳಿಗೆ ಮುಟ್ಟಿಸಲು ತಿಳಿಸಿದರು. ಕುಟುಂಬ ಕಲ್ಯಾಣ ಕಾರ್ಯಕ್ರಮದಲ್ಲಿ ಉತ್ತಮ ಸೇವೆ ಸಲ್ಲಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯವರನ್ನು ಸನ್ಮಾನಿಸಲಾಯಿತು.
ಈ ವೇಳೆ ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅನುμÁ್ಠನ ಅಧಿಕಾರಿ ಡಾ.ಎಂ.ವ್ಹಿ.ಕಿವಡಸನ್ನವರ, ಜಿಲ್ಲಾ ಸರ್ಜನ್ ಡಾ.ಸರಸ್ವತಿ, ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ.ಚಾಂದನಿ, ಜಿಲ್ಲಾ ಕ್ಷಯರೋಗ ಅಧಿಕಾರಿ ಡಾ.ಅನಿಲ ಕುರಬು, ಜಿಲ್ಲಾ ತರಬೇತಿ ಕೇಂದ್ರದ ಪ್ರಾಚಾರ್ಯೆ ಡಾ.ಸರೋಜ ತಿಗಡಿ, ಡಾ.ಲಕ್ಷ್ಮೀ, ಡಾ.ಹಾಲಸ್ವಾಮಿ ಮಲ್ಲನಗೌಡರ, ಡಾ.ಸಂಪತಸಿಂಗ ರಂಗವಾಲೆ, ಡಾ. ಶಿವಲೀಲಾ ಶಿರೋಳ, ಮಾಲಿಂಗಾ ದಾಸ್ತಿಕೊಪ್ಪ, ಗುರಸಿದ್ದ ಕರಗುಪ್ಪಿ, ಬಸವರಾಜ ಯಲಿಗಾರ, ಸುವರ್ಣ ಐಹೊಳೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.