Banglore

ಇಂಧನ ಅಭಿವೃದ್ಧಿ ನಿಗಮದಿಂದ ಸಿಎಂ ಪರಿಹಾರ ನಿಧಿಗೆ 3 ಕೋಟಿ ರೂ. ಚೆಕ್

Share

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ 3 ಕೋಟಿ ರೂಪಾಯಿ ಮೊತ್ತದ ಚೆಕ್ಕನ್ನು ಸ್ವೀಕರಿಸಿದರು.

ಇಂಧನ ಸಚಿವ ಸುನಿಲ್‍ಕುಮಾರ್ ಮುಖ್ಯಮಂತ್ರಿಗಳಿಗೆ ಚೆಕ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನಿಗಮದ ಅಧ್ಯಕ್ಷ ಚಂದು ಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags:

error: Content is protected !!