ಪದ್ಮಶ್ರೀ ಪುರಸ್ಕøತ, ಖ್ಯಾತ ಪ್ರವಚನಕಾರ ಇಬ್ರಾಹಿಂ ಸುತಾರ್ ಅವರ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.
ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ ಸಾಮರಸ್ಯದ ಕೊಂಡಿ, ಸೌಹಾರ್ದ ಸಮಾಜದ ಪ್ರತಿಪಾದಕರು ಪದ್ಮಶ್ರೀ ಪುರಸ್ಕøತರಾಗಿದ್ದ ಕನ್ನಡದ ಕಬೀರ ಇಬ್ರಾಹಿಂ ಸುತಾರ ಅವರ ನಿಧನ ತೀವ್ರ ದುಃಖ ಉಂಟು ಮಾಡಿದೆ. ಸುತಾರ ಅವರ ಅಗಲಿಕೆ ಸಮಾಜಕ್ಕೆ ದೊಡ್ಡ ನಷ್ಟ. ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.