ಎಸ್‍ಎಸ್‍ಎಲ್‍ಸಿ ಮತ್ತು ಪಿಯು ಪರೀಕ್ಷೆ ನಿಗದಿಯಂತೆ ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ಕೊಟ್ಟಿದ್ದಾರೆ.

ಚಾಮರಾಜನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪರೀಕ್ಷೆ ದಿನಾಂಕದ ವಿಚಾರದಲ್ಲಿ ಒಂದು ದಿನವೂ ಹೆಚ್ಚು ಕಡಿಮೆ ಆಗುವುದಿಲ್ಲ. ಕೊರೊನಾ ಮೂರನೇ ಅಲೆಯಲ್ಲಿ ಅನೇಕ ರಾಜ್ಯಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ದೇವರ ಆಶೀರ್ವಾದಿಂದ ರಾಜ್ಯದಲ್ಲಿ ಅಂತಹ ಸಂದರ್ಭ ಬರಲಿಲ್ಲ ಎಂದರು. ಶೇಕಡಾ 99ರಷ್ಟು ಶಾಲೆಗಳು ತೆರೆದಿದ್ದವು. ಮಕ್ಕಳ ಹಾಜರಾತಿಯೂ ಚೆನ್ನಾಗಿದೆ. ಹಾಗಾಗಿ ನಿಗದಿತ ದಿನಾಂಕದಲ್ಲಿ ಪರೀಕ್ಷೆ ನಡೆಸಲು ಯಾವುದೇ ತೊಂದರೆ ಇಲ್ಲ. ಈ ವರ್ಷದ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್‍ಎಸ್‍ಎಲ್‍ಸಿ ಹಾಗೂ ಏಪ್ರಿಲ್ 16ರಿಂದ ಮೇ 4ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆಯಲಿದ್ದು. ಪರೀಕ್ಷಾ ದಿನಾಂಕ ಯಾವುದೇ ಕಾರಣಕ್ಕೂ ಬದಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
