ಮಹಿಂದ್ರಾ ಬುಲೆರೋ ಪಿಕಪ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಕ್ಕೇರಿ ತಾಲೂಕಿನ ಕಣಗಲಾ ಬಳಿ ನಡೆಸಿದೆ.

ಹುಕ್ಕೇರಿ ತಾಲೂಕಿನ ಕಣಗಲಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಂದ್ರಾ ಪಿಕಪ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಕಾರಣ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಇವರ ಕುರಿತು ಯಾವುದೇ ಮಾಹಿತಿ ತಿಳಿದುಬಂದಿಲ್ಲ. ನಿಪ್ಪಾಣಿಯಿಂದ ಬೆಳಗಾವಿಗೆ ಸಾಗುವ ವೇಳೆ ಈ ಅಪಘಾತ ಸಂಭವಿಸಿದ್ದು ಮೃತರ ಗುರುತು ಪತ್ತೆಯಾಗಿಲ್ಲ. ಇನ್ನು ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆಸಿದೆ.