ಇಷ್ಟು ದಿನ ಕರಾವಳಿಗೆ ಮೀಸಲಾಗಿದ್ದ ಹಿಜಾಬ್ ವಿವಾದ ಈಗ ರಾಜ್ಯದಲ್ಲೆಡೆ ವ್ಯಾಪಿಸುತ್ತಿದೆ. ಕೋಮು ಸೌಹಾರ್ದ, ಭಾತೃತ್ವ ಸಾರುವ ಬಸವನಾಡಿಗೂ ಹಿಜಾಬ್ ವರ್ಸಸ್ ಕೇಸರಿ ಶಾಲು ವ್ಯಾಪಿಸಿದೆ. ಎರಡು ಕಾಲೇಜಿನ ನೂರಾರು ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಆಗಮಿಸಿದ್ದಾರೆ. ಅಲ್ಲದೇ ಕಾಲೇಜು ಎದುರಿನಲ್ಲಿ ಜೈ ಶ್ರೀರಾಮ ಘೋಷಣೆ ಮೊಳಗಿವೆ. ಬಸವನಾಡಿನ ತಾಲ್ಲೂಕಿನ ಎರಡು ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಇನ್ನೂ ಸ್ಥಳಕ್ಕೆ ಪೊಲೀಸರು ಆಗಮಿಸಿ ಶಾಂತತೆ ಕಾಪಾಡಿದ್ದಾರೆ. ಈ ಕುರಿತು ಇಲ್ಲಿದೆ ಡಿಟೇಲ್ಸ್…
ರಾಜ್ಯದಲ್ಲಿ ಇದೀಗ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಭುಗಿಲೆದ್ದಿದೆ.ಬಸವನಾಡು ವಿಜಯಪುರ ಜಿಲ್ಲೆಯಲ್ಲೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸಿದ್ದಾರೆ. ವಿಜಯಪುರ ಜಿಲ್ಲೆ ಇಂಡಿ ಪಟ್ಟಣದ ಎರಡು ಕಾಲೇಜುಗಳಲ್ಲಿ ಕೇಸರಿ ಶಾಲು ಹಾಕಿಕೊಂಡು ವಿದ್ಯಾರ್ಥಿ ಗಳು ಆಗಮಿಸಿದ್ದು ಶಾಂತೇಶ್ವರ ಪಿಯುಸಿ ಕಾಲೇಜು ಹಾಗೂ ಗು.ರಾ. ಗಾಂಧಿ ಕಲಾ, ವಾಯ್, ಎ. ಪಾಟೀಲ್ ವಾಣಿಜ್ಯ ಹಾಗೂ ಮಾ ಫು ದೋಶಿ ವಿಜ್ಞಾನ ಪದವಿ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಆಗಮಿಸಿದ್ದಾರೆ. ಇಂಡಿ ಪಟ್ಟಣದಲ್ಲಿರೋ ಎರಡು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡೇ ತರಗತಿಗಳಿಗೆ ವಿದ್ಯಾರ್ಥಿಗಳು ಆಗಮಿಸಿದ್ದರು. ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿ ಬಂದ ಹಿನ್ನೆಲೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ಇಡೀ ಕಾಲೇಜಿಗೆ ರಜೆ ಘೋಷಿಸಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಶಾಂತೇಶ್ವರ ಪದವಿ ಪೂರ್ವ, ಪದವಿ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. 20 ಕ್ಕು ಅಧಿಕ ವಿದ್ಯಾರ್ಥಿಗಳು ಹಿಜಾಬ್ ವಿರೋಧಿಸಿ ಕೇಸರಿ ಶಾಲು ಹಾಕಿ ಬಂದಿದ್ದರು.
ಕ್ಲಾಸ್ ಗಳಿಗು ಹಾಜರಾಗಲು ಹೋಗಿದ್ದರು. ಉಪನ್ಯಾಸಕರು ಕೇಸರಿ ಶಾಲು ಹಾಕಿದವರನ್ನ ಕ್ಲಾಸ್ ನಿಂದ ಹೊರ ಹಾಕಿದಲ್ಲದೇ ಜೊತೆಗೆ ಇಡೀ ಕಾಲೇಜಿಗೆ ರಜೆ ಘೋಷಣೆ ಮಾಡಲಾಯಿತು. ಗೊಂದಲ ಸೃಷ್ಟಿಯಾಗದಿರಲಿ ಎನ್ನುವ ದೃಷ್ಟಿಯಿಂದ ಇಡೀ ಕಾಲೇಜಿಗೆ ರಜೆ ಘೋಷಣೆ ಮಾಡಲಾಯಿತು. ಹಿಜಾಬ್ ಹಾಗೂ ಕೇಸರಿ ಶಾಲು ವಿವಾದವು ಬಸವನಾಡು ವಿಜಯಪುರಕ್ಕೂ ವ್ಯಾಪಿಸಿದೆ. ವಿದ್ಯಾರ್ಥಿಗಳು ವಿಜಯಪುರ ಜಿಲ್ಲೆಯಲ್ಲೂ ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಬಂದಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿ ಎರಡು ಕಾಲೇಜುಗಳಲ್ಲಿ ಕೇಸರಿ ಶಾಲು ಹಾಕಿಕೊಂಡು ವಿದ್ಯಾರ್ಥಿಗಳು ಆಗಮಿಸಿದ್ದರು. ಶಾಂತೇಶ್ವರ ಪಿಯುಸಿ ಕಾಲೇಜು ಹಾಗೂ ಜಿ ಆರ್ ಬಿ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಆಗಮಿಸಿದ್ದರ ಹಿನ್ನೆಲೆಯಲ್ಲಿ ಹಿಜಾಬ್ ಕೇಸರಿ ಶಾಲು ವಿಚಾರ ವಿವಾದಕ್ಕೆ ಕಾರಣವಾಗಬಾರದೆಂದು ಎರಡೂ ಕಾಲೇಜುಗಳಿಗೆ ಆಡಳಿತ ಮಂಡಳಿ ತುರ್ತು ಸಭೆ ನಡೆಸಿ ರಜೆ ಘೋಷಿಸಿದವು. ಇಂದು ಒಂದು ದಿನದ ಮಟ್ಟಿಗೆ ರಜೆ ಘೋಷಣೆ ಮಾಡಿದ್ದು ನಾಳೆಯಿಂದ ಸರ್ಕಾರ ಜಾರಿ ಮಾಡಿರೋ ಪ್ರಕಾರ ಯುನಿಫಾರ್ಮ್ ಹಾಕಿಕೊಂಡು ಬರುವಂತೆ ಸೂಚಿಸಿದ್ದಾರೆ.
ಕಾಲೇಜುಗಳಿಗೆ ರಜೆ ಘೋಷಿಸಿದ ಕಾರಣ ವಿದ್ಯಾರ್ಥಿಗಳು ವಾಪಸ್ ತೆರಳಿದರು.
ಹಿಜಾಬ್ VS ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ವಿಜಯಪುರ ಜಿಲ್ಲೆಯ ಇಂಡಿ ಶಾಂತೇಶ್ವರ ಕಾಲೇಜಿಗೆ ಕೇಸರಿ ಶಾಲು ಧರಿಸಿ ಬಂದ ಪ್ರಕರಣದಲ್ಲಿ ಕಾಲೇಜು ಎದುರೇ ಜೈ ಶ್ರೀರಾಮ್ ಘೋಷಣೆ ಹಾಕಲಾಗಿದೆ. ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿ ಗಳಿಂದ ಜೈ ಶ್ರೀರಾಮ್ ಘೋಷಣೆ ಮೊಳಗಿದ್ದು ಹಿಜಾಬ್ ವಿರೋಧಿಸಿ ಕೇಸರಿ ಶಾಲು ಧರಿಸಿದ ನೂರಕ್ಕು ಅಧಿಕ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದ ಹಿನ್ನೆಲೆ ಶಾಂತೇಶ್ವರ ಪಿಯು, ಡಿಗ್ರಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ರಜೆ ಘೋಷಣೆ ಬೆನ್ನಲ್ಲೆ ಕಾಲೇಜು ಗೇಟ್ ಎದುರು ಸೇರಿದ ಕೇಸರಿ ಶಾಲು ಧರಿಸಿದ ನೂರಕ್ಕು ಅಧಿಕ ವಿದ್ಯಾರ್ಥಿಗಳಿಂದ ಜೈ ಶ್ರೀರಾಮ್ ಘೋಷಣೆ ಮೊಳಗಿದವು. ಇನ್ನೂ
ಸ್ಥಳಕ್ಕೆ ಇಂಡಿ ಪೊಲೀಸರ ಆಗಮಸಿ ಪರಿಸ್ಥಿತಿ ಹತೋಟಿಗೆ ತಂದರಲ್ಲದೇ ಶಾಂತತೆ ಕಾಯ್ದುಕೊಂಡರು. ಕೇಸರಿ ಶಾಲು ಧರಿಸಿ ಆಗಮಿಸಿದ ವಿದ್ಯಾರ್ಥಿಗಳು ಮಾಧ್ಯಮಗಳ ಜೊತೆ ಮಾತನಾಡಿ ಹಿಜಾಬ್ ಧರಿಸದೆ ವಿದ್ಯಾರ್ಥಿನಿಯರು ತರಗತಿಗೆ ಬಂದರೆ ಕೇಸರಿ ತೆಗೆದಿರುಸುತ್ತೇವೆ. ಸರ್ಕಾರದ ನಿಯಮ ಪಾಲಿಸುವುದಕ್ಕೆ ಸಿದ್ದವಾಗಿದ್ದೇವೆ. ಆದರೆ ಹಿಜಾಬ್ ಧರಿಸಿ ಕಾಲೇಜ್ ಬಂದರೆ ಕೇಸರಿಯನ್ನು ಧರಿಸಿಯೇ ತರಗತಿಗೆ ಹೋಗುತ್ತೇವೆ. ಎಲ್ಲರಿಗೂ ಸಮಾನತೆ ಬೇಕು. ಅವರಿಗೊಂದು ಕಾನೂನು, ನಮ್ಮಗೆ ಮಾತ್ರ ಕಾನೂನು ಅಂದರೆ ಅದಕ್ಕೆ ಒಪ್ಪಲು ಸಿದ್ದರಿಲ್ಲ ಎಂದು ಕೇಸರಿ ಶಾಲು ಧರಿಸಿ ಬರುತ್ತಿರುವ ವಿದ್ಯಾರ್ಥಿಗಳು ಪ್ರತಿಕ್ರಿಯೆ ನೀಡಿದ್ದಾರೆ.
ಒಟ್ನಲ್ಲಿ ಕರಾವಳಿ ಪ್ರದೇಶದಲ್ಲಿ ಉಂಟಾಗಿದ್ದ ವಿವಾದವು ಬಸವನಾಡಿಗೆ ವ್ಯಾಪಿಸಿದೆ. ನಾಳೆ ಈ ಕುರಿತು ಹೈಕೋರ್ಟ್ ತೀರ್ಪನ್ನು ಕೊಡಲಿದೆ. ಅದ್ಯಾವ ತೀರ್ಪು ಬರುತ್ತದೆಯೋ ಎಂದು ಎಲ್ಲರ ದೃಷ್ಟಿ ಹೈಕೋರ್ಟ್ ನತ್ತ ನೆಟ್ಟಿದೆ.