ಕಾಂಗ್ರೆಸ್ ಸರ್ಕಾರದ 60 ವರ್ಷಗಳ ಅವಧಿಯಲ್ಲಿ ಇಂತಹ ಘಟನೆ ಎಂದೂ ನಡೆದಿಲ್ಲ. ಈಗ ಹೀಗೆ ಆಗಬಾರದಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗುತ್ತಿರುವುದು ದುರದೃಷ್ಟಕರ. ತಕ್ಷಣವೇ ವಿವಾದ ತಣ್ಣಗಾಗಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಗ್ರಹಿಸಿದರು.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಶಾಲಾ-ಕಾಲೇಜುಗಳಲ್ಲಿ ಬಣ್ಣ, ಬಣ್ಣಗಳ ಮಧ್ಯೆ ಗಲಾಟೆ ಪ್ರಾರಂಭವಾಗಿದೆ. ಕೇಸರಿ ಹಾಗೂ ಅದರ ವಿರುದ್ಧ ಹಲವು ಬಣ್ಣಗಳ ಮಧ್ಯೆ ಘರ್ಷಣೆ ನಡೆಯುತ್ತಿದೆ. ಶಿಕ್ಷಣ ರಂಗದಲ್ಲಿ ಬಣ್ಣ, ಬಣ್ಣಗಳ ಮಧ್ಯೆ ಘರ್ಷಣೆ ನಡೆಯುತ್ತಿದೆ. ಈ ಘರ್ಷಣೆ ತಪ್ಪಿಸಲು ಸರ್ಕಾರ, ಶಾಲಾ ಆಡಳಿತ ಮಂಡಳಿ ಮುಂದಾಗಬೇಕು. ಈ ವಿವಾದ ರಾಜಕೀಯ ಆಗಿದೆ. ರಾಜ್ಯದಲ್ಲಿ ತಾರಕಕ್ಕೇರುತ್ತಿರುವ ಹಿಜಬ್-ಕೇಸರಿ ವಿವಾದವನ್ನು ತಕ್ಷಣವೇ ತಣ್ಣಗಾಗಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಆಗ್ರಹಿಸಿದರು.
