ವಿಧಾನಸಭೆಯಲ್ಲಿ ಕಾಂಗ್ರೆಸ್‍ನಿಂದ ಅಹೋರಾತ್ರಿ ಧರಣಿ, ಗದ್ದಲ, ಕೋಲಾಹಲ ಮುಂದುವರಿದಿದ್ದ ಹಿನ್ನೆಲೆಯಲ್ಲಿ ವಿಧಾನಸಭೆ ಕಲಾಪವನ್ನು ಸೋಮವಾರ ಬೆಳಗ್ಗೆ 11ಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮುಂದೂಡಿದ್ದಾರೆ.
ಹೌದು ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ಮಾಡಿದ್ದ ಕಾಂಗ್ರೆಸ್ ಸದಸ್ಯರು ಶುಕ್ರವಾರ ಅಧಿವೇಶನ ಆರಂಭವಾಗುತ್ತಿದ್ದಂತೆ ಮತ್ತೆ ಸದನದ ಭಾವಿಗಿಳಿದು ಧರಣಿ ನಡೆಸಿದರು. ಪ್ರತಿಪಕ್ಷ ನಾಯಕರ ಮನವೊಲಿಕೆಗೆ ಸ್ಪೀಕರ್ ಕಾಗೇರಿ ಮುಂದಾಗಿದ್ದರು. ಧರಣಿ ಬಿಟ್ಟು ಕಲಾಪದಲ್ಲಿ ಭಾಗಿಯಾಗುವಂತೆ ಸ್ಪೀಕರ್ ಮನವಿ ಮಾಡಿದರು. ಸಿಎಂ, ಮಾಜಿ ಸಿಎಂ ಮಾತಿಗೂ ಕಾಂಗ್ರೆಸ್ ನಾಯಕರು ಜಗ್ಗದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕರ ಮನವೊಲಿಕೆಗೆ ಸ್ಪೀಕರ್ ಮುಂದಾಗಿದ್ದರು. ಸ್ಪೀಕರ್ ನೇತೃತ್ವದ ಸಭೆಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಸಚಿವ ಈಶ್ವರಪ್ಪ ಅವರ ರಾಜೀನಾಮೆಗೆ ಪಟ್ಟು ಹಿಡಿದರು. ಆದರೆ ಎμÉ್ಟೀ ಮನವೊಲಿಕೆ ಪ್ರಯತ್ನ ಮಾಡಿದರು ಒಪ್ಪಲಿಲ್ಲ. ಇನ್ನು ಸ್ಪೀಕರ್ ಪ್ರಶ್ನೋತ್ತರ ಕಲಾಪ ಕೈಗೆತ್ತಿಕೊಂಡರು. ಈ ವೇಳೆಯೂ ಸದನದಲ್ಲಿ ಗದ್ದಲ, ಕೋಲಾಹಲ ಮುಂದುವರಿತು. ಗದ್ದಲದ ನಡುವೆಯೇ ಪ್ರಶ್ನೋತ್ತರ ಕಲಾಪ ಕೂಡ ಶುರುವಾಯ್ತು.
ಕಲಾಪ ನಡೆಯಲು ಬಿಡಲ್ಲ ಎನ್ನುವುದು ಸರಿಯಲ್ಲ. ನಾವು ಹೇಳಿದ್ದೇ ನಡೆಯಬೇಕು ಎನ್ನುವುದು ಸರಿಯಲ್ಲ. ವಿಧಾನಸಭೆ ಪ್ರಜಾಪ್ರಭುತ್ವದ ದೇವಸ್ಥಾನವಾಗಿದೆ. ಸದನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕು. ಅದನ್ನು ಬಿಟ್ಟು ಸಚಿವರ ರಾಜೀನಾಮೆಗೆ ಆಗ್ರಹಿಸಿ ಧರಣಿ, ವಿಧಾನಸಭೆಯಲ್ಲಿ ಪ್ರತಿಭಟನೆ ಮಾಡುವುದು ಸರಿಯಲ್ಲ. ಪ್ರತಿಭಟನೆ ಮಾಡುವುದು ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕು. ಆದರೆ ಸದನದ ಹೊರಗೆ ಎಲ್ಲಿಬೇಕಾದರೂ ಪ್ರತಿಭಟನೆ ಮಾಡಿ. ಒಂದು ವಿಚಾರಕ್ಕಾಗಿ ಕಲಾಪ ಹಾಳುಮಾಡುವುದು ಸರಿಯಲ್ಲ. ಇದನ್ನು ನಿಯಂತ್ರಿಸಲು ಕ್ರಮಕೈಗೊಳ್ಳಿ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಸಚಿವ ಜೆ.ಸಿ.ಮಾಧುಸ್ವಾಮಿ ಒತ್ತಾಯ ಮಾಡಿದರು. ಕಾಂಗ್ರೆಸ್ ಸದಸ್ಯರು ಮತ್ತಷ್ಟು ಗದ್ದಲ ಹೆಚ್ಚು ಮಾಡಿದ ಹಿನ್ನೆಲೆ ಸೋಮವಾರ ಬೆಳಗ್ಗೆ 11ಕ್ಕೆ ಕಲಾಪವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮುಂದೂಡಿದರು.