Banglore

ಕಾಂಗ್ರೆಸ್ ಮುಖಂಡರ ಮನವೊಲಿಸಲು ರಾಜಾಹುಲಿ ಯಡಿಯೂರಪ್ಪ ಎಂಟ್ರಿ

Share

ಸಚಿವ ಈಶ್ವರಪ್ಪ ಹೇಳಿಕೆಯನ್ನು ಖಂಡಿಸಿ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ಸದಸ್ಯರನ್ನ, ಬಿಜೆಪಿ ಮುಖಂಡರು ಭೇಟಿ ನೀಡಿ ಧರಣಿಯನ್ನು ಕೈಬಿಡುವಂತೆ ಮನವೊಲಿಸಲು ಪ್ರಯತ್ನಿಸಿದರು.

ದೆಹಲಿಯ ಕೆಂಪು ಕೋಟೆಯ ಮೇಲೆ ಕೇಸರಿ ಧ್ವಜವನ್ನು ಹಾರಿಸುತ್ತೇವೆ ಎಂದು ಸಚಿವ ಈಶ್ವರಪ್ಪ ಹೇಳಿಕೆನ್ನು ಖಂಡಿಸಿ ಕಾಂಗ್ರೆಸ್ ಸದಸ್ಯರು ಇಂದು ಸದನದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಸರಕಾರ ಸಚಿವ ಈಶ್ವರಪ್ಪ ಹೇಳಿಕೆಯನ್ನು ಸಮರ್ಥಿಸಿಕೊಂಡ ಬೆನ್ನಲ್ಲೇ ಕಾಂಗ್ರೆಸ್ ಸದಸ್ಯರು ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಪ್ರಮುಖ ನಾಯಕರು ಧರಣಿ ನಿರತ ಸದಸ್ಯರನ್ನು ಭೇಟಿ ಮಾಡಿದರು. ಈ ವೇಳೆ ಕಾಂಗ್ರೆಸ್ ಸದಸ್ಯರ ಮನವೊಲಿಸಲು ಬಿಜೆಪಿ ಪ್ರಮುಖ ನಾಯಕರಾದ ಸಿ.ಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿ.ಎಂ. ಯಡಿಯೂರಪ್ಪ, ವಿಧಾನಸಭಾ ಸಭಾಪತಿಗಳಾದ ವಿಶ್ವೇಶ್ವರ ಹೆಗಡೆ ಕಾಗೇರಿ ಮೊದಲಾದ ನಾಯಕರು ಮಾಜಿ ಸಿ.ಎಂ ಸದ್ಧರಾಮಯ್ಯ, ಡಿ.ಕೆ. ಶಿವಕುಮರ್ ಮೊದಲಾದ ಕಾಂಗ್ರೆಸ್ ನಾಯಕರ ಮನವೊಲಿಸಲು ಪ್ರಯತ್ನಿಸಿದರು.

Tags:

error: Content is protected !!