ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಇಲಾಖೆಗಳ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ, ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಹಾಗೂ ಸರ್ಕಾರದ ಹಣಕಾಸು ಇಲಾಖೆ ಮತ್ತು ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
