Khanapur

ಖಾನಾಪುರದಲ್ಲಿ ಹೆರಿಗೆ ಆಸ್ಪತ್ರೆ ಸ್ಲ್ಯಾಬ್ ನಿರ್ಮಾಣ ಕಾಮಗಾರಿಗೆ ಶಾಸಕಿ  ಅಂಜಲಿ ನಿಂಬಾಳ್ಕರ್ ಪೂಜೆ     

Share

ಖಾನಾಪೂರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಬೃಹತ್ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ಲ್ಯಾಬ್ ಕಾಮಗಾರಿಗೆ ಪೂಜೆ ಸಲ್ಲಿಸಿ ಕಾಂಕ್ರೀಟ್ ಹಾಕುವ ಮೂಲಕ ಶಾಸಕಿ ಅಂಜಲಿ ನಿಂಬಾಳ್ಕರ್ ಚಾಲನೆ ನೀಡಿದರು.
ಹೌದು ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರ ಕನಸಿನ ಕೂಸಾದ ಈ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕೆಲಸ ಭರದಿಂದ ಸಾಗಿದೆ. ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಬೃಹತ್ ಅಸ್ಪತ್ರೆಯ ಕೆಲಸ ಇನ್ನೂ ಕೆಲವೇ ತಿಂಗಳುಗಳಲ್ಲಿ ಮುಕ್ತಾಯಗೊಳ್ಳಲಿದೆ. ಸಧ್ಯ ಆಸ್ಪತ್ರೆಯ ಸ್ಲಾö್ಯಪ್ ಕಾಮಗಾರಿಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಪೂಜೆ ಸಲ್ಲಿಸಿ ಸ್ಲಾö್ಯಪ್ ಕಾಮಗಾರಿಗೆ ಕಾಂಕ್ರೀಟ್ ಹಾಕುವ ಮೂಲಕ ಕಾರ್ಯಕ್ಕೆ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್, ಖಾನಾಪೂರ ತಾಲೂಕಿಗೆ ಹೆಮ್ಮೆಯ ವಿಷಯವಾದ ಈ ಎಮ್ ಸಿ ಎಚ್ ಆಸ್ಪತ್ರೆಯ ಕೆಲಸ ಚಾಲನೆ ಇದೆ. ೧೫ಕೋಟಿ ರೂ ವೆಚ್ಚದಲ್ಲಿ ೬೦ ಬೆಡ್ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಈ ಕೆಲಸದ ಸ್ಲ್ಯಾಬ್ ಹಾಕುವ ಕಾರ್ಯಕ್ರಮದ ಪೂಜೆ ನೇರವಿರಿಸಿದ್ದೇವೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ, ಆರ್ಶಾವಾದಬೇಕು. ಏಕೆಂದರೆ ಇದು ತಾಲೂಕಿಗೆ ಹೆಮ್ಮೆಯ ವಿಷಯ ದೊಡ್ಡ ಆಸ್ಪತ್ರೆ ನಾನು ಒಬ್ಬ ಸ್ತ್ರೀ ವೈದ್ಯೆಯಾಗಿರುವುದರಿಂದ ನನ್ನಗೂ ಹೆಮ್ಮೆಯ ವಿಷಯ. ಖಾನಾಪೂರ ತಾಲೂಕಿನಲ್ಲಿ ಬಡಜನರಿದ್ದಾರೆ. ಅವರಿಗೆ ಬೆಳಗಾವಿಗೆ ಹೋಗಿ ಹೆರಿಗೆ ಮಾಡಿಸಿಕೊಳ್ಳಲು ಕಷ್ಟವಾಗುತ್ತಿತ್ತು. ಇದನ್ನು ಗಮನಿಸಿ ಈ ಸುಸಜ್ಜಿತವಾದ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ವೈದ್ಯೆಯಾಗಿರುವ ನನಗೆ ಜನ ಶಾಸಕಿ ಮಾಡಿ ಆಶಿರ್ವಾದ ನೀಡಿದ್ದಾರೆ. ಅವರು ನೀಡಿದ ಆಶಿರ್ವಾದಕ್ಕೆ ಚಿರಋಣಿ. ಇನ್ನು ಸ್ವಲ್ಪ ತಿಂಗಳಿನಲ್ಲಿ ಇದನ್ನು ಲೋಕಾರ್ಪಣೆ ಮಾಡಿ ಸಾರ್ವಜನಿಕರಿಗೆ ಸಮರ್ಪಿಸಲಾಗುವುದು. ಈ ಮೂಲಕ ತಾಯಿ ಮತ್ತು ಮಕ್ಕಳ ಆರೈಕೆಗೆ ಹೆಚ್ಚಿನ ಒತ್ತು ನೀಡುವುದು ಎಂದರು. ಈ ಸಂದರ್ಭದಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಡಾಕ್ಟರ್ ಸಂಜಯ್ ನಾಂದ್ರೇ ಸೇರಿದಂತೆ ತಾಲೂಕಾ ಸಾರ್ವಜನಿಕರಿಗೆ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ಮತ್ತು ಇನ್ನಿತರರು ಉಪಸ್ಥಿತರಿದ್ದರು.

Tags:

error: Content is protected !!