Vijaypura

ಖಾಸಗಿ ಬಸ್ ಹಾಗೂ ಬೈಕ್ ನಡುವೆ ಅಪಘಾತ: ಇಬ್ಬರ ಸಾವು

Share

ಖಾಸಗಿ ಬಸ್ ಹಾಗೂ ಬೈಕ್ ಮದ್ಯೆ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಬೈಕ್ ಸವಾರರ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 13 ರಲ್ಲಿ ನಡೆದ ಅವಘಡದಲ್ಲಿ ಮಲ್ಲಪ್ಪ ಮಂಕಣಿ (24), ಯಲ್ಲನಗೌಡ ಮಂಕಣಿ (23) ಮೃತ ದುರ್ದೈವಿಗಳಾಗಿದ್ದಾರೆ‌. ಇಬ್ಬರೂ ನಿಡಗುಂದಿ ತಾಲೂಕಿನ ಅಬ್ಬಿಹಾಳ ಗ್ರಾಮದ ನಿವಾಸಿಗಳಾಗಿದ್ದಾರೆ. ನಿಡಗುಂದಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:

error: Content is protected !!