ಶಾರ್ಟ್ ಸಕ್ರ್ಯೂಟ್‍ನಿಂದ ಗಾದಿ ಅಂಗಡಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ನಿಪ್ಪಾಣಿ ನಗರದ ಓಲ್ಡ್ ಪಿಬಿ ರಸ್ತೆಯ ಅಂಗಡಿಯೊಂದರಲ್ಲಿ ನಡೆದಿದೆ.

ಹೌದು ನಗರದ ಪ್ರಮುಖ ಹಳೇ ಪಿಬಿ ರಸ್ತೆಯಲ್ಲಿರುವ ಖ್ಯಾತ ಸದಾನಂದ ದತ್ತಾತ್ರಯ ಪಾಟೀಲ್ ಅವರ ಮಾಲೀಕತ್ವದ ಪದ್ಮಾ ಗಾದಿ ಅಂಗಡಿ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಅಂಗಡಿಯೇ ಸುಟ್ಟು ಕರಕಲಾಗಿದ್ದು, ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ, ಪೆÇಲೀಸರು ಹಾಗೂ ಸ್ಥಳೀಯರು, ವ್ಯಾಪಾರಸ್ಥರು, ಪೌರಾಯುಕ್ತರು, ಪಾಲಿಕೆ ಸದಸ್ಯರುಗಳು ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದರಾದರೂ ಬೆಂಕಿ ಎರಡು ಗಂಟೆಗಳ ಕಾಲ ತನ್ನ ಅಟ್ಟಹಾಸವನ್ನು ಮೆರೆದಿದೆ. ಹಾಗಾಗಿ ಇಡೀ ಅಂಗಡಿ ಬೆಂಕಿಗೆ ಆಹುತಿಯಾಗಿದೆ. ಪ್ರಾಥಮಿಕ ಅಂದಾಜಿನ ಪ್ರಕಾರ ಕೋಟ್ಯಂತರ ರೂಪಾಯಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಇನ್ನು ಅಗ್ನಿಯ ತೀರ್ವತೆಗೆ ಅಕ್ಕಪಕ್ಕದ ಅಂಗಡಿಗಳಿಗೂ ಸಹ ಹಾನಿಯಾಗಿದೆ.

ಸ್ಥಳಕ್ಕೆ ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ್, ನಗರಾದ್ಯಕ್ಷ ಜಯವಂತ ಭಾಟ್ಲೆ, ನಗರ ಪೆÇಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಕೃಷ್ಣವೇಣಿ ಗುರ್ಲಹೊಸೂರು, ಸೇರಿದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದರು. ಇನ್ನು ಬೆಂಕಿಯನ್ನ ನಂದಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.