ಗೋಕಾಕ್ ಜೆಎಸ್‍ಎಸ್ ಕಾಲೇಜು ಮುಂದೆ ಹಿಜಾಬ್ ವಿಚಾರಕ್ಕೆ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳು ತಾತ್ಕಾಲಿಕವಾಗಿ ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದಾರೆ.

ಸಮುದಾಯ ಮುಖಂಡರು, ಶಾಲಾ ಆಡಳಿತ ಮಂಡಳಿಯ ಸಭೆ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ. ಪೆÇೀಷಕರು ಹಾಗೂ ಶಾಲಾ ಆಡಳಿತ ಮಂಡಳಿಯಿಂದ ಮನವೊಲಿಕೆಗೆ ಯತ್ನಿಸಿದ್ದು. ಸಂಜೆ ನಡೆಯಲಿರುವ ಪಾಲಕರು ಹಾಗೂ ಆಡಳಿತ ಮಂಡಳಿಯ ಸಭೆಯಲ್ಲಿ ಒಂದು ವೇಳೆ ವಿದ್ಯಾರ್ಥಿಗಳ ಬೇಡಿಕೆಗೆ ಆಡಳಿತ ಮಂಡಳಿ ಒಪ್ಪದಿದ್ದರೆ ಮತ್ತೆ ಪ್ರತಿಭಟನೆ ಮಾಡುವುದಾಗಿ ವಿದ್ಯಾರ್ಥಿನಿಯರ ಎಚ್ಚರಿಕೆ ಕೊಟ್ಟಿದ್ದಾರೆ. ಸಧ್ಯ ವಿದ್ಯಾರ್ಥಿನಿಯರು ತಾತ್ಕಾಲಿಕವಾಗಿ ಪ್ರತಿಭಟನೆ ಹಿಂದಕ್ಕೆ ಪಡೆದಿದ್ದು. ಸಂಜೆ ಏನಾಗುತ್ತದೆ ಎಂದು ಕಾದು ನೋಡಬೇಕಿದೆ.
