State

ಗೋವಾದಲ್ಲಿ ಅಂಜಲಿ ನಿಂಬಾಳ್ಕರ್ ಭರ್ಜರಿ ಪ್ರಚಾರ: ಬೈಕ್ ಮೇಲೆ ಮತಬೇಟೆ..!

Share

ಗೋವಾದಲ್ಲಿ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್  ಭರ್ಜರಿ ಪ್ರಚಾರ ನಡೆಸುತ್ತಿದ್ದು, ಬೈಕ್ ಮೇಲೆ ತೆರಳಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪರ ಮತಬೇಟೆ ನಡೆಸಿದರು.

ಹೌದು ಗೋವಾದಲ್ಲಿ ರಾಜ್ಯದಿಂದ ಬಿಜೆಪಿ, ಕಾಂಗ್ರೆಸ್ ನಾಯಕರು ತಮ್ಮ ಪಕ್ಷಗಳ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ನಡೆಸಿದ್ದಾರೆ. ಅದೇ ರೀತಿ ಶಾಸಕಿ ಅಂಜಲಿ ನಿಂಬಾಳ್ಕರ್ ಕೂಡ ಗೋವಾದಲ್ಲಿಯೇ ಠಿಕಾಣಿ ಹೂಡಿದ್ದು, ಸೆಂಟ್ ಆಂಡ್ರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟೋನಿ ಫನಾರ್ಂಡಿಸ್ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದು ಮನೆ, ಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ ಬೈಕ್ ಮೇಲೆಯೂ ತೆರಳಿ ಪ್ರಚಾರ ನಡೆಸಿದರು.

ಒಟ್ಟಿನಲ್ಲಿ ರಾಜ್ಯದ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಭರ್ಜರಿ ಮತಬೇಟೆ ನಡೆಸುತ್ತಿದ್ದು, ಅಂತಿಮವಾಗಿ ಗೋವಾ ಮತದಾರ ಪ್ರಭುಗಳು ಯಾರಿಗೆ ಆಶೀರ್ವದಿಸುತ್ತಾರೆ ಎಂದು ಕಾದು ನೋಡಬೇಕಿದೆ.

 

Tags:

error: Content is protected !!