ಗ್ರಾಹಕರಿಗೆ ಅರಿವು ಮೂಡಿಸುವ ನಿಟ್ಟಿನಲಿ ್ಲಇಂದು ಗ್ರಾಹಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಜಿ.ಹಿರೇಮಠ ಹೇಳಿದರು.

ಬೆಳಗಾವಿ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಆಹಾರದ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಮತ್ತು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆಯ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕರ ದಿನಾಚರಣೆಗೆ ಜಿಲ್ಲಾಧಿಕಾರಿ ಎಂಜಿ ಹಿರೇಮಠ ಚಾಲನೆ ನೀಡಿದರು.

ನಂತರ ಮಹಾಂತೇಶ ಹಿರೇಮಠಅವರು ಮಾತನಾಡಿ ಮುಖ್ಯವಾಗಿ ಗ್ರಾಹಕರಿಗೆ ಜಾಗೃತಿ ಮೂಡಿಸಬೇಕು ಎನ್ನುವ ಉದ್ದೇಶದಿಂದ ಗ್ರಾಹಕರ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಹಕರಿಗೆ ತೂಕದಲ್ಲಾಗಲಿ ಇಲ್ಲ ಕಲಬೇರಕೆ ಹೀಗೆ ಹಲವಾರೂ ವಿಷಯದ ಬಗ್ಗೆ ಯಾವ ರೀತಿಯ ಮಾಹಿತಿ ಇರಬೇಕು ಎಂಬುವುದನ್ನು ಅರಿಯಬೇಕು ಮತ್ತು ಈ ರೀತಿಯ ಘಟನೆ ಕಂಡು ಬಂದಲ್ಲಿ ಈ ಕೂಡಲೇ ದೂರು ನೀಡಬೇಕು. ಅಂಥವರ ಮೇಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಆಹಾರ ಇಲಾಖೆಯ ಅಧಿಕಾರಿ ಮಾತನಾಡಿ ಗ್ರಾಹಕರಿಗೆ ಬಿಪಿಎಲ್ ಮತ್ತು ಎಪಿಎಲ್ ಕಾರ್ಡಗಳನ್ನು ಯಾವುದೇ ಅಡೆತಡೆ ಇಲ್ಲದೇ ಗ್ರಾಹಕರಿಗೆ ಒದಗಿಸುತ್ತಿದ್ದೇವೆ. ಈ ಕಾರ್ಯಾಗಾರ ಯಶಸ್ವಿಯಾಗಲಿ ಮತ್ತು ಈ ಕಾರ್ಯಾಗಾರದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಿ ಎಂದರು.
ಈ ಸಂದರ್ಭದಲ್ಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು, ನ್ಯಾಯವಾದಿ ಎನ್.ಆರ್.ಲಾತೂರ, ಜಾಗೃತ ಸಮಿತಿಯ ಸದಸ್ಯರು ಸೇರಿದಂತೆಇತರೆ ಇಲಾಖೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.