ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಪ್ರಯಾಣಿಕು ಸ್ಥಳದಲ್ಲಿಯ ಮೃತಪಟ್ಟ ಘಟನೆ ಚಿತ್ರದುರ್ಗದ ಬಳಿ ಹೆದ್ದಾರಿಯಲ್ಲಿ ನಡೆದಿದೆ.

ಚಿತ್ರದುಗ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರಲ್ಲಿರುವ ಗುಯಿಲಾಳು ಟೋಲ್ ಬಳಿ ಈ ಘಟನೆ ಸಂಭವಿಸಿದ್ದು, ಅಪಘಾತದ ತೀವೃತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಈ ಅಪಘಾತ ಕುರಿತಂತೆ ಇನನೂ ಹೆಚ್ಚಿನ ಮಾಹಿತಿ ಬರಬೇಕದೆ. ಬೆಳಗಾವಿಯಿಂದ ಬೆಂಗಳೂರು ಕಡೆಗೆ ಕಾರು ಹೋಗುತ್ತಿತ್ತು. ಈ ವೇಳೆ ಸಂಭವಿಸಿದ ಈ ದುರ್ಘಟನೆಯಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ಬೆಳಗಾವಿ ಮೂಲದ ರಮೇಶ ಶಾನಬಾಗ್, ವಿಶ್ವನಾಥ ಶಾನಬಾಗ್, ಸೀಮಾ ಶಾನಬಾಗ್ ಎಂದು ಗುರುತಿಸಲಾಗಿದೆ. ಐಮಂಗಲ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಈ ಘಟನೆ ನಡೆದಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.