State

ಹಿಜಾಬ್ ಧರಿಸಿಯೇ ಅಧಿವೇಶನಕ್ಕೆ ಬಂದ ಕಲಬುರ್ಗಿ ಶಾಸಕಿ ಖನೀಜ್ ಫಾತಿಮಾ..!

Share

ರಾಜ್ಯದಲ್ಲಿ ಇಂದಿನಿಂದ ವಿಧಾನ ಮಂಡಲದ ಜಂಟಿ ಅಧಿವೇಶನ ಪ್ರಾರಂಭವಾಗಿದ್ದು ಕಲಬುರ್ಗಿ ಉತ್ತರ ಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ ಹಿಜಾಬ್ ಧರಿಸಿಯೆ ಅಧಿವೇಶನಕ್ಕೆ ಆಗಮಿಸಿದ್ದಾರೆ.

ರಾಜ್ಯದಲ್ಲಿ ಹಿಜಾಬ್ ಕೇಸರಿ ಶಾಲು ವಿವಾದ ತಾರಕ್ಕಕ್ಕೇರಿದೆ. ಇಂತಹ ಸಂದರ್ಭದಲ್ಲಿ ಹಿಜಾಬ್‍ಗೆ ಅವಕಾಶ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ್ ಕಾಂಗ್ರೆಸ್ ಶಾಸಕಿ ಖನೀಜ್ ಫಾತಿಮಾ ಅಧಿವೇಶನಕ್ಕೆ ನಾನು ಹಿಜಾಬ್ ಧರಿಸಿಯೇ ಹೋಗುತ್ತೇನೆ. ಧೈರ್ಯವಿದ್ದರೆ ನನ್ನನ್ನು ತಡೆಯಲಿ ಎಂದು ಹೇಳಿಕೆ ನೀಡಿದ್ದರು. ಅದರಂತೆ ಶಾಸಕಿ ಹಿಜಾಬನ್ನು ಧರಿಸಿಯೇ ಸದನಕ್ಕ ಆಗಮಿಸಿದ್ದಾರೆ.

ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ವಿಪಕ್ಷ ಕಾಂಗ್ರೆಸ್ ರಾಜ್ಯಸರಕಾರದ ಮೇಲೆ ಮುಗಿಬೀಳಲು ಸಿದ್ಧತೆ ನಡೆಸಿದೆ. ಸದನದಲ್ಲಿ ಹಿಜಾಬ್ ವಿವಾದ ವಾಕ್ಸಮರಕ್ಕೆ ಕಾರಣವಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.

Tags:

error: Content is protected !!