Accident

ಟೈರ್ ಒಡೆದು ಲಾರಿಗೆ ಬೆಂಕಿ: ಲಾರಿ ಸುಟ್ಟು ಭಸ್ಮ

Share

ಚಲಿಸುತ್ತಿದ್ದ ಲಾರಿಯ ಟೈರ್ ಒಡೆದು ಬೆಂಕಿ ಕಾಣಿಸಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿ 50ರ ಅಬ್ಬಿಹಾಳ ಕ್ರಾಸ್ ಬಳಿ‌ ಘಟನೆ ನಡೆದಿದೆ. ಬಳ್ಳಾರಿಯಿಂದ ನೆರೆಯ ಮಹಾರಾಷ್ಟ್ರದ ಔರಂಗಾಬಾದ ಗೆ ಕಲ್ಲಿದ್ದಿಲು ಪುಡಿ ಸಾಗಿಸುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಬೆಂಕಿಗಾಹುತಿಯಾಗಿದೆ‌. ಮಾಹಿತಿ ತಿಳಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ‌ ನಂದಿಸಿದೆ. ಅದೃಷ್ಠ ವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲಾ. ನಿಡಗುಂದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:

error: Content is protected !!