ಖಾನಾಪೂರ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್‍ರವರನ್ನು ತಮಿಳುನಾಡು ಕಾಂಗ್ರೆಸ್ ಸಹಾಯಕ ಪ್ರದೇಶ ರಿಟ್ಯುರಿಂಗ್ ಆಫೀಸರ್ ಆಗಿ ಶಾಸಕಿ ಅಂಜಲಿ ನಿಂಬಾಳ್ಕರ್ ನೇಮಕಗೊಳಿಸಿ ಎಐಸಿಸಿ ಆದೇಶ ಹೊರಡಿಸಿದೆ.

ಖಾನಾಪೂರ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರ ಪಕ್ಷ ನಿμÉ್ಠ, ಮತ್ತು ಪ್ರಾಮಾಣಿಕ ಕಾರ್ಯವನ್ನು ಪರಿಗಣಿಸಿ ಎಐಸಿಸಿ ವತಿಯಿಂದ ಈ ಆದೇಶವನ್ನು ಹೊರಡಿಸಲಾಗಿದೆ. ಸದ್ಯಕ್ಕೆ ಅವರು ಗೋವಾ ವಿಧಾನಸಭಾ ಚುನಾವಣೆಯ ಉಸ್ತುವಾರಿಯಾಗಿಯೂ ಕೂಡಾ ಶಾಸಕಿ ಅಂಜಲಿ ನಿಂಬಾಳ್ಕರ್ ನೇಮಕಗೊಂಡಿದ್ದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪ್ರಚಾರದಲ್ಲಿ ಸಕ್ರಿಯವಾಗಿರುವ ಇವರಿಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ಈ ಮಹತ್ವದ ಜವಾಬ್ದಾರಿಯನ್ನು ನೀಡಿದೆ.
