Banglore

ನಮ್ಮ ಪಾಲಿನ ನೀರು ಹಂಚಿಕೆ ಆಗೋವರೆಗೂ ನದಿ ಜೋಡಣೆಗೆ ನಮ್ಮ ವಿರೋಧ: ಸಿಎಂ ಬೊಮ್ಮಾಯಿ

Share

ಗೋದಾವರಿ, ಕೃμÁ್ಣ, ಪೆನ್ನಾರ್ ನದಿ ಜೋಡಣೆಗೆ ಸಿಎಂ ಬೊಮ್ಮಾಯಿ ವಿರೋಧ ವ್ಯಕ್ತಪಡಿಸಿದ್ದಾರೆ. ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ನಮ್ಮ ಪಾಲಿನ ನೀರು ಹಂಚಿಕೆಯಾಗುವವರೆಗೆ ವಿರೋಧವಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಮಂಗಳವಾರ ನವದೆಹಲಿಯ ಕರ್ನಾಟಕ ಭವನದಲ್ಲಿ ಅಂತರರಾಜ್ಯ ಜಲ ವಿವಾದ ಕುರಿತು ಕಾನೂನು ತಜ್ಞರೊಂದಿಗೆ ಸಭೆ ನಡೆಯಿತು. ಈ ವೇಳೆ ರಾಜ್ಯದ ಜಲ ವಿವಾದಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮೇಕೆದಾಟು, ಮಹದಾಯಿ, ಕೃಷ್ಣ ಜಲ ವಿವಾದಗಳ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ಮಾಡಲಾಯಿತು. ಸಭೆಯಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ರಾಜ್ಯ ಸರ್ಕಾರದ ಅಧಿಕಾರ ಜನರಲ್ ಪ್ರಭುಲಿಂಗ ನಾವದಗಿ ಸೇರಿದಂತೆ ಹಿರಿಯ ಕಾನೂನು ತಜ್ಞರು ಉಪಸ್ಥಿತರಿದ್ದರು. ಸಭೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ನಮ್ಮ ಪಾಲಿನ ನೀರು ಹಂಚಿಕೆಯಾಗುವವರೆಗೆ ವಿರೋಧವಿದೆ. ಎಲ್ಲಿಯವರೆಗೆ ನಮ್ಮ ಪಾಲಿನ ನೀರಿನ ಬಗ್ಗೆ ಹಂಚಿಕೆ ಅಂತಿಮವಾಗುದಿಲ್ಲವೋ, ಅಲ್ಲಿಯವರೆಗೆ ನದಿ ಜೋಡಣೆಗೆ ನಮ್ಮ ವಿರೋಧ ಇರುತ್ತದೆ. ಈ ಬಗ್ಗೆ ನಿರ್ಮಲಾ ಸೀತಾರಾಮನ್ ಜತೆಯೂ ಚರ್ಚಿಸಿದ್ದೇನೆ. ಅದಕ್ಕೆ ಅವರು ಎರಡು ರಾಜ್ಯಗಳು ಒಪ್ಪಿದರೆ ಮಾತ್ರ ಇದು ಸಾಧ್ಯ ಎಂದು ತಿಳಿಸಿದ್ದಾರೆ ಎಂದರು.

ಅಂತಾರಾಜ್ಯ ಜಲ ವಿವಾದಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಕೃμÁ್ಣ ನ್ಯಾಯಾಧಿಕರಣದ ಆದೇಶ ಅಧಿಸೂಚನೆಗೆ ಮನವಿ ಮಾಡಲಾಗಿದೆ. ಸುಪ್ರೀಂಕೋರ್ಟ್‍ನಲ್ಲಿ ಅಧಿಸೂಚನೆ ಹೊರಡಿಸುವ ಬಗ್ಗೆ ವಿಚಾರಣೆಗೆ ನ್ಯಾಯಾಧೀಶರನ್ನು ನೇಮಕ ಮಾಡಬೇಕು. ಇಲ್ಲದಿದ್ದರೆ ಓಪನ್ ಕೋರ್ಟ್‍ನಲ್ಲಿ ಮೆನ್ಷನ್‍ಗೆ ನಿರ್ಧಾರ ಮಾಡಲಾಗುವುದು. ಮೇಕೆದಾಟು ವಿಚಾರವಾಗಿ ನಮ್ಮ ನಿಲುವು ಸ್ಪಷ್ಟ. ತಮಿಳುನಾಡಿನ ಗುಂಡಾರು ವೈಗಾರ್ ಯೋಜನೆಗೆ ವಿರೋಧವಿದೆ. ಹೈಡ್ರೋ ಪರರ್ ಯೋಜನೆಗೂ ವಿರೋಧ ಮಾಡಲು ನಿರ್ಧರಿಸಿದ್ದೇವೆ ಎಂದರು.

ಇನ್ನು ಮಹದಾಯಿ ಬಗ್ಗೆ ಚರ್ಚೆಯಾಗಿದೆ. ಕೋರ್ಟ್‍ನಲ್ಲಿ ಬೇಗ ವಿಚಾರಣೆ ನಡೆಯಬೇಕಿದೆ. ಡಿಪಿಆರ್ ನೀಡಿದ್ದೇವೆ, ಕೆಲವು ಸ್ಪಷ್ಟನೆ ಕೇಳಿದ್ದರು. ಅದನ್ನು ನೀಡಿದ್ದೇವೆ, ಕೆನಾಲ್ ರೆಡಿಯಾಗಿದೆ, ತಿರುವಿಗೆ ಅವಕಾಶ ಸಿಗಲಿದೆ ಎಂದು ಇದೇ ವೇಳೆ ಸಿಎಂ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಅಮಿತ್ ಶಾ ಅವರನ್ನು ಅಲ್ಪ ಸಮಯದಲ್ಲಿ ಭೇಟಿ ಮಾಡಿದ್ದೇನೆ. ಅಗ್ರೆಸ್ಸಿವ್ ಆಗಿ ಕೆಲಸ ಮಾಡುವಂತೆ ಹೇಳಿದ್ದಾರೆ. ಬಜೆಟ್ ಮತ್ತು ಕೆಲಸ ವಿಚಾರದಲ್ಲಿ ಅಗ್ರೆಸ್ಸಿವ್ ಇರಲಿ ಎಂದಿದ್ದಾರೆ. ಸಂಪುಟ ವಿಸ್ತರಣೆ ಸಂಬಂಧ ನಡ್ಡಾ ಅವರನ್ನು ಭೇಟಿ ಮಾಡುವಂತೆ ಹೇಳಿದ್ದಾರೆ. ಇಂದು ನಡ್ಡಾ ಅವರನ್ನು ಭೇಟಿಯಾಗುತ್ತೇನೆ. ನಡ್ಡಾ ಅವರನ್ನು ಭೇಟಿ ಮಾಡಿದ ಮೇಲೆ ಗೊತ್ತಾಗಲಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಒಟ್ಟಿನಲ್ಲಿ ಅಂತರರಾಜ್ಯ ಜಲವಿವಾದ ಸಂಬಂಧ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದು. ಆದಷ್ಟು ಬೇಗನೇ ರಾಜ್ಯದ ಬಹು ನಿರೀಕ್ಷಿತ ಮಹದಾಯಿ, ಮೇಕೆದಾಟು ಸೇರಿ ಇನ್ನಿತರ ಯೋಜನೆಗಳು ಜಾರಿಗೊಂಡರೆ ರಾಜ್ಯದ ಜನತೆಗೆ ಅನುಕೂಲ ಆಗಲಿದೆ.

 

Tags:

error: Content is protected !!