ಶಿವಮೊಗ್ಗ ಜಿಲ್ಲೆಯ ಹೊಳಲೂರು ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ದಿನಾಚರಣೆಯ ಅಂಗವಾಗಿ ನರೇಗೋತ್ಸವ ಕಾರ್ಯಕ್ರಮಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.

ಇಂದು ಬೆಳಿಗ್ಗೆ ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ತಾಲ್ಲೂಕಿನ ಹೊಳಲೂರು ಜಿಲ್ಲಾ ಪಂಚಾಯತನ ಅಂಬೇಡ್ಕರ ಭವನದಲ್ಲಿ ನಡೆದ ಕರ್ನಾಟಕ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಹಾತ್ಮ ಗಾಂಧಿ ನರೇಗಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ನರೇಗೋತ್ಸವ ಕಾರ್ಯಕ್ರಮವನ್ನು ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಿದರು. ಈ ವೇಳೆ ಆಯುಕ್ತರಾದ ಶಿಲ್ಪಾನಾಗ್, ಮತ್ತು ಹಿರಿಯ ಅಧಿಕಾರಿಗಳು, ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.
