Hukkeri

ನಾಡೋಜ ಚನ್ನವೀರ ಕಣವಿ ಅವರ ನಿಧನಕ್ಕೆ ಹುಕ್ಕೇರಿ ಹಿರೇಮಠ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಂತಾಪ

Share

ಸೃಜನಶೀಲ ಸಾಹಿತಿ ಚನ್ನವೀರ ಕಣವಿ ಅವರು, ಸಾಹಿತ್ಯ, ಕನ್ನಡ ನಾಡು, ನುಡಿಗಾಗಿ ತಮ್ಮದೆಯಾದ ಸ್ಥಾನವನ್ನು ಪಡೆದಿದ್ದರು. ಸಜ್ಜನಿಕೆಯ ಸಾಕಾರ ಮೂರ್ತಿಯಾಗಿದ್ದ ಅವರು ತಮ್ಮ ಮೃದು ಹಾಗೂ ಮಾನವೀಯತೆಯ ಮಾತುಗಳಿಂದ ಮನಸ್ಸು ಗೆಲ್ಲುವ ಅಪರೂಪದ ವ್ಯಕ್ತಿತ್ವವನ್ನು ಹೊಂದಿದ್ದರು.

ಸಾಹಿತ್ಯದ ಮೂಲಕ ತಮ್ಮ ಕಲ್ಪನೆ ಮತ್ತು ವಾಸ್ತವಾಂಶವನ್ನು ಕೂಡ ಪರಿಣಾಮಕಾರಿಯಾಗಿ ಬಿಂಬಿಸಿದವರು. ಪ್ರತಿಷ್ಟಿತ ನಾಡೋಜ ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು. ಪ್ರಶಸ್ತಿಗೆ ಗೌರವ ತಂದುಕೊಡುವ ರೀತಿಯಲ್ಲಿ ಅವರ ವ್ಯಕ್ತಿತ್ವವಿತ್ತು. ಸದಾ ಕಾಲ ತಮ್ಮ ಸಂಯಮ ಹಾಗೂ ಗಾಂಭೀರ್ಯತೆಯನ್ನು ಮೆರೆದವರು. ಅವರ ಅಗಲಿಕೆಯಿಂದ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.‌ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಆ ಭಗವಂತ ಅವರ ಕುಟುಂಬಕ್ಕೆ ದಯಪಾಲಿಸಲಿ ಎಂದು ಶ್ರೀಗಳು ಪ್ರಾರ್ಥಿಸಿದರು.

Tags:

error: Content is protected !!