ಬೆಳಗಾವಿಯ ಬಾಕ್ಸೈಟ್ ರಸ್ತೆಯಲ್ಲಿರುವ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ 12ನೇ ಜಾತ್ರಾ ಮಹೋತ್ಸವ ನಿಮಿತ್ಯ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಬಾಕ್ಸೈಟ್ ರಸ್ತೆಯಲ್ಲಿರುವ ಉಷಾ ಕಾಲೋನಿಯಲ್ಲಿರುವ ಶ್ರೀ ಮಹಾಲಕ್ಷ್ಮೀ ದೇವಿಯ 12ನೇ ಜಾತ್ರಾ ಮಹೋತ್ಸವ ನಿಮಿತ್ಯ ಜನವರಿ 30ರಿಂದ ಫೆಬ್ರುವರಿ 10ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಹುಕ್ಕೇರಿ ಹಿರೇಮಠದ ಚಂದ್ರಶೇಖರ್ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಸಹಸ್ರ ಚಂಡಿಯಾಗ, ಭಗವದ್ಗೀತೆ ಮತ್ತು ಸಿದ್ಧಾಂತ ಶಿಖಾಮನಿ ಪ್ರವಚನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ನಾಳೆ ಸೋಮವಾರ ಉಚಿತ ಸಾಮೂಹಿಕ ವಿವಾಹ, ಮಂಗಳವಾರ ಸಹಸ್ರ ಚಂಡಿಯಾಗ ಪೂರ್ಣಾಹುತಿ, ಗುರುವಾರ ಸಾಮೂಹಿಕ ಲಲಿತಾ ಸಹಸ್ರನಾಮ ಕುಂಕುಮಾರ್ಚನೆ ಹಾಗೂ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ಹಾಗೂ ಮಹಾಪ್ರಸಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಕೂಡ ಮಹಾಲಕ್ಷ್ಮೀ ದೇವಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಗಿತ್ತು. ಈ ವೇಳೆ ನೂರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದುಕೊಂಡರು.
ಈ ವೇಳೆ ಮಹಾಲಕ್ಷ್ಮೀ ದೇವಸ್ಥಾನ ಕಮೀಟಿಯ ಸತೀಶ ಮಾಳವದೆ ಮಾತನಾಡಿ ಮಂಗಳವಾರ ಸಹಸ್ರ ಚಂಡಿಯಾಗ ಪೂರ್ಣಾಹುತಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಭಾಗಿಯಾಗಲಿದ್ದಾರೆ. ಅದೇ ರೀತಿ ಎಲ್ಲ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ಮನವಿ ಮಾಡಿಕೊಂಡರು.
ಒಟ್ಟಿನಲ್ಲಿ ನಿರಂತರವಾಗಿ 12 ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಮಹಾಲಕ್ಷ್ಮೀ ದೇವಿ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದು. ಭಕ್ತರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ದೇವಸ್ಥಾನಕ್ಕೆ ಆಗಮಿಸುತ್ತಿರುವುದು ಕಂಡು ಬಂತು.