ಮೇವು ಹಗರಣಕ್ಕೆ ಸಂಬAಧಿಸಿದ ಐದನೇ ಪ್ರಕರಣದಲ್ಲಿ ಆರ್‌ಜೆಡಿ ಮುಖಂಡ ಲಾಲೂ ಪ್ರಸಾದ್ ಯಾದವ್‌ಗೆ ದೋಷಿ ಎಂದು ರಾಂಚಿಯ ವಿಶೇಷ ಕೇಂದ್ರೀಯ ತನಿಖಾ ದಳ ನ್ಯಾಯಾಲಯ ಮಂಗಳವಾರ ತೀರ್ಪು ನೀಡಿದೆ.
ಲಾಲೂ ಪ್ರಸಾದ್ ಯಾದವ್ ಬಿಹಾರದ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ದುಮ್ಕಾ ಖಜಾನೆಯಲ್ಲಿ ನಡೆದ ೩.೧೩ ಕೋಟಿ ರೂ. ಅವ್ಯವಹಾರಕ್ಕೆ ಸಂಬAಧಿಸಿದAತೆ ಹೊರಬಿದ್ದ ನಾಲ್ಕು ಪ್ರಕರಣಗಳಲ್ಲೂ ದೋಷಿ ಎಂದು ಪರಿಗಣಿಸಲಾಗಿದ್ದ ಲಾಲೂ ಯಾದವ್, ಒಟ್ಟು ೧೩.೫ ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಇದೀಗ ಅದಕ್ಕೆ ಹೆಚ್ಚುವರಿ ೭ ವರ್ಷ ಸೇರ್ಪಡೆಯಾದಂತಾಗಿದೆ. ಈ ಮೂಲಕ ನಾಲ್ಕು ಹಗರಣಗಳಿಂದ ಲಾಲೂ ಪ್ರಸಾದ್ ಯಾದವ್ ಒಟ್ಟು ೨೦.೫ ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿದೆ.ಲಾಲೂ ಪ್ರಸಾದ್ ಆರೋಗ್ಯ ಹದಗೆಟ್ಟ ಕಾರಣ ಈಚೆಗೆ ಅವರನ್ನು ದೆಹಲಿಯ ಏಮ್ಸ್ಗೆ ದಾಖಲಿಸಲಾಗಿತ್ತು. ತಮ್ಮ ಶಿಕ್ಷೆಯ ಅವಧಿಯನ್ನು ಅರ್ಧ ಪೂರೈಸಿದ್ದು, ಜಾಮೀನು ನೀಡಬೇಕೆಂದು ಕೋರಿ ಅವರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಫೆಬ್ರವರಿಯಲ್ಲಿ ಜಾಮೀನು ತಿರಸ್ಕರಿಸಲಾಗಿತ್ತು. ಜಾರ್ಖಂಡ್‌ನ ಡೊರಾಂಡಾ ಖಜಾನೆಯಿಂದ ೧೩೯ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಅಕ್ರಮವಾಗಿ ಹಿಂತೆಗೆದುಕೊAಡ ಪ್ರಕರಣದಲ್ಲಿ ಅವರು ವಿಶೇಷ ಸಿಬಿಐ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಿದ್ದರು.ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ೭ ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ಪ್ರಕರಣಕ್ಕೆ ಸಂಬAಧಿಸಿದAತೆ ಕೋರ್ಟು ೩೦ ಲಕ್ಷ ರೂ.ಗಳ ದಂಡವನ್ನೂ ಹಾಕಲಾಗಿತ್ತು.
