Belagavi

ಬೆಳಗಾವಿಯಲ್ಲಿ ಪಂಚಮಸಾಲಿ ರಾಜ್ಯ ಕಾರ್ಯಕಾರಣಿ ಸಭೆ ಆರಂಭ

Share

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಹೋರಾಟ ವಿಚಾರ ಬೆಳಗಾವಿ ಗಾಂಧಿಭವನದಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮಹತ್ವದ ಸಭೆ ಕರೆಯಲಾಗಿದೆ.

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ರಾಷ್ಟ್ರಮಾತೆ ಕಿತ್ತೂರು ರಾಣಿ ಚನ್ನಮ್ಮಾಜಿ 193ನೇ ಸ್ಮರಣೋತ್ಸವ ಹಿನ್ನೆಲೆಯಲ್ಲಿ ಚನ್ನಮ್ಮಾಜಿ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿದರು. ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ, ಅರವಿಂದ ಬೆಲ್ಲದ, ವೀಣಾ ಕಾಶಪ್ಪನವರ, ಮಾಜಿ ಸಚಿವ ಎ.ಬಿ.ಪಾಟೀಲ್ ಸೇರಿದಂತೆ ಇನ್ನಿತರ ನಾಯಕರು ಭಾಗಿಯಾಗಿದ್ದರು.

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಲು ವಿಳಂಬ ಆಗುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತಿದೆ. ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ಒಗ್ಗೂಡಿ ಹೋರಾಟ ನಡೆಸುವ ರೂಪರೇμÉ ಬಗ್ಗೆಯೂ ಚರ್ಚಿಸಲಾಗುತ್ತಿದೆ.

Tags:

error: Content is protected !!