Belagavi

ಬೆಳಗಾವಿಯಲ್ಲಿ ಶಾಲಾ ಆಟೋ ಪಲ್ಟಿ: ಮೂವರು ಮಕ್ಕಳಿಗೆ ಗಾಯ

Share

ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ಪಲ್ಟಿಯಾಗಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಆಟೋ ನಗರದಲ್ಲಿರುವ ಸುರಭಿ ಹೋಟೆಲ್ ಬಳಿ ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಸ್ಕೂಲ್ ಆಟೋ ಪಲ್ಟಿಯಾಗಿದ್ದು, ಆಟೋದಲ್ಲಿ ಶಾಲೆಗೆ ಹೋಗುತ್ತಿದ್ದ ಕೇಂದ್ರೀಯ ವಿದ್ಯಾಲಯದ ಮೂವರು ವಿದ್ಯಾರ್ಥಿಗಳಿಗೆ ಗಾಯವಾಗಿದೆ. ಮುಚ್ಚಂಡಿ ಗ್ರಾಮದ ಅಂಕುಶ್ ಕೊಲಜಿಗೌಡ(7), ಶ್ರೇಯಾ ಭದ್ರಶೆಟ್ಟಿ(15), ತ್ರಿಶಾ ಭದ್ರಶೆಟ್ಟಿ(10) ಗಾಯಾಳುಗಳು ಎಂದು ಗುರುತಿಸಲಾಗಿದೆ. ಅದೇ ರೀತಿ ಆಟೋ ಚಾಲಕ ಶೇಖರ್ ಪಾಟೀಲ್‍ಗೂ ಕೂಡ ಗಾಯವಾಗಿದೆ. ಎಲ್ಲ ಗಾಯಾಳುಗಳನ್ನು ತಕ್ಷಣವೇ ಆಂಬುಲೇನ್ಸ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

 

Tags:

error: Content is protected !!