ಬೆಳಗಾವಿ ನಗರದಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಬೆಳಗಾವಿ ನಗರದ ಕುಮಾರ ಗಂಧರ್ವ ಕಲಾಮಂದಿರ ಆವರಣದ ಬಸವರಾಜ ಕಟ್ಟಿಮನಿ ಸಭಾಂಗಣದಲ್ಲಿ ನಡೆದ ಸಂತ ಸೇವಾಲಾಲ್ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಈ ವೇಳೆ ಗಣ್ಯರು ಸಂತ ಸೇವಾಲಾಲರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸಂತ ಸೇವಾಲಾಲರ ಆದರ್ಶವನ್ನು ಸ್ಮರಿಸಿಕೊಂಡರು. ಸೇವಾಲಾಲರ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಬೇಕಿತ್ತು. ಆದರೆ ಕೆಲ ಕಾರಣಗಳಿಂದಾಗಿ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ. ಹಾಗಾಗಿ ಸೇವಾಲಾಲರ ಆದರ್ಶಗಳು ನಮ್ಮೆಲ್ಲರ ಬದುಕಿಗೆ ಆದರ್ಶಪ್ರಾಯವಾದವು. ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಪಾಲಿಸೋಣ ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಅಶೋಕ ದುಡಗುಂಟಿ, ಸಂಸದೆ ಮಂಗಳಾ ಅಂಗಡಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಎಂ.ಟಿ ರಾಠೋಡ್, ಆರ್.ಟಿ.ರಾಠೋಡ್, ಪ್ರಭು ರಾಠೋಡ್, ಮಂಜುನಾಥ ಪಮ್ಮಾರ್, ಅಶೋಕ್ ಪುಜಾರಿ, ಶಿವಾನಂದ ಚವ್ಹಾಣ್, ಪಿ.ವಿ.ನಾಯಕ್, ಮೊದಲಾದವರು ಉಪಸ್ಥಿತರಿದ್ದರು.