ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಮಹಾಮಾರಿ ಕೊರೊನಾ ತನ್ನ ಅಟ್ಟಹಾಸ ಮೆರೆದಿದೆ. ಇಂದು ಹೊಸದಾಗಿ 1060 ಪಾಸಿಟಿವ್ ಕೇಸ್‍ಗಳು ದೃಢಪಟ್ಟಿವೆ. ಅದೇ ರೀತಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಬುಧವಾರ ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನನಲ್ಲಿ ಜಿಲ್ಲೆಯಲ್ಲಿ 1060 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಒಟ್ಟು ಸೋಂಕಿತರ ಸಂಖ್ಯೆ 93858ಕ್ಕೆ ಏರಿಕೆಯಾಗಿದೆ. ಇಂದು 1056 ಜನರು ಗುಣಮುಖರಾಗಿದ್ದು, ಈವರೆಗೆ 86132 ಜನರು ಗುಣಮುಖರಾಗಿದ್ದಾರೆ. ಇನ್ನು ಜಿಲ್ಲೆಯಲ್ಲಿ 6749 ಆಕ್ಟಿವ್ ಕೇಸ್‍ಗಳು ಬಾಕಿಯಿವೆ. ಅದೇ ರೀತಿ ಇಂದು ಓರ್ವ ವ್ಯಕ್ತಿ ಕೊರೊನಾದಿಂದ ಸಾವನ್ನಪ್ಪಿದ್ದು, ಸಾವನ್ನಪ್ಪಿರುವವರ ಸಂಖ್ಯೆ 977ಕ್ಕೆ ಏರಿಕೆಯಾಗಿದೆ.