Belagavi

ಬೆಳಗಾವಿ ಜಿಲ್ಲೆಯಲ್ಲಿ ಇಂದು 321 ಕೊರೊನಾ ಪಾಸಿಟಿವ್, 2 ಸಾವು

Share

ಬೆಳಗಾವಿ ಜಿಲ್ಲೆಯಲ್ಲಿ ಇಂದು ಹೊಸದಾಗಿ 321 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಅದೇ ರೀತಿ ಇಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಸೋಮವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 321 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 97954ಕ್ಕೆ ಏರಿಕೆಯಾಗಿದೆ. ಅದೇ ರೀತಿ ಇಂದು ಇಬ್ಬರು ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದ್ದು, ಈವರೆಗೆ ಒಟ್ಟು 989 ಜನರು ಮೃತರಾಗಿದ್ದಾರೆ. ಇಂದು 504 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ 89551 ಜನರು ಕೊರೊನಾದಿಂದ ಗುಣಮುಖರಾಗಿದ್ದಾರೆ. 7414 ಆಕ್ಟಿವ್ ಕೇಸ್‍ಗಳು ಬಾಕಿಯಿವೆ.

Tags:

error: Content is protected !!