Belagavi

ಬೆಳಗಾವಿ ಜಿಲ್ಲೆಯಲ್ಲಿ ಮುಂದುವರಿದ ಕೊರೊನಾ ಆರ್ಭಟ: 1028 ಪಾಸಿಟಿವ್, 2 ಸಾವು

Share

ಬೆಳಗಾವಿ ಜಿಲ್ಲೆಯಲ್ಲಿಂದು ಮತ್ತೆ ಕೊರೊನಾ ತನ್ನ ಕದಂಬ ಬಾಹುಗಳನ್ನು ಚಾಚಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು ಒಟ್ಟು 1028 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ.

ಶನಿವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಬುಲೆಟಿನ್ ಪ್ರಕಾರ ಜಿಲ್ಲೆಯಾದ್ಯಂತ ಒಟ್ಟಾರೆ 1028 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 97412ಕ್ಕೆ ಏರಿಕೆಯಾಗಿದೆ. ಇನ್ನು ಇಂದು 971 ಜನ ಗುಣಮುಖರಾಗಿದ್ದು, ಈವರೆಗೆ 88479 ಜನ ಕೊರೊನಾದಿಂದ ಗುಣಮುಖರಾಗಿದ್ದಾರೆ. ಅದೇ ರೀತಿ ಇಂದು ಇಬ್ಬರು ಕೊರೊನಾದಿಂದ ಸಾವನ್ನಪ್ಪಿದ್ದು, ಈವರೆಗೆ ಕೊರೊನಾದಿಂದ ಸಾವನ್ನಪ್ಪಿರುವವರ ಸಂಖ್ಯೆ 985ಕ್ಕೆ ಏರಿಕೆಯಾಗಿದೆ. 7948 ಸಕ್ರೀಯ ಪ್ರಕರಣಗಳು ಬಾಕಿ ಇವೆ.

Tags:

error: Content is protected !!