Belagavi

ಬೆಳಗಾವಿ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 392ನೇ ಜಯಂತಿ ಆಚರಣೆ..

Share

ಬೆಳಗಾವಿ ನಗರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 392 ಜಯಂತ್ಯುತ್ಸವವನ್ನು ಆಚರಿಸಲಾಯಿತು.
ಹೌದು ನಗರದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಮಹಾನಗರ ಪಾಲಿಕೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಶಿವಾಜಿ ಮಹಾರಾಜರ ಜಯಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಿವಾಜಿ ಮಹಾರಾಜರ ಪುತ್ಥಳಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ನೆರೆದಿದ್ದ ಗಣ್ಯರು ಪುಷ್ಪನಮನ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಬೆಳಗಾವಿ ಸಂಸದರಾದ ಶ್ರೀಮತಿ ಮಂಗಳಾ ಅಂಗಡಿ, ಬೆಳಗಾವಿ ಉತ್ತರ ಶಾಸಕರಾದ ಅನೀಲ್ ಬೆನಕೆ, ದಕ್ಷಿಣ ಶಾಸಕರಾದ ಅಭಯ್ ಪಾಟೀಲ್, ಬುಡಾ ಚೇರಮನ್‍ರಾದ ಸಂಜಯ್ ಬೆಳಗಾಂವಕರ್, ಪಾಲಿಕೆಯ ಕಮಿಶನರ್ ರುದ್ರೇಶ್ ಘಾಳಿ, ಉಪ ಆಯುಕ್ತೆ ಲಕ್ಷ್ಮಿ ನಿಪ್ಪಾಣಿಕರ್, ನಗರಸೇವಕರಾದ ನಿತಿನ್ ಜಾಧವ್, ಗಿರೀಶ್ ಧೋಂಗಾಡಿ, ರಾಜು ಭಾತ್‍ಕಾಂಡೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಪಾಲಿಕೆ ಸಿಬ್ಬಂದಿಗಳು ಹಾಗೂ ಇತರರೂ ಕೂಡ ಉಪಸ್ಥಿತರಿದ್ದರು.

Tags:

error: Content is protected !!